ಇತ್ತೀಚಿನ ಸುದ್ದಿ
ಮಂಗಳೂರು ಏರ್ ಪೋರ್ಟ್ ಟು ಮರವೂರು: 11ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ
04/02/2023, 22:57

ಸುರತ್ಕಲ್ (reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 11 ರಂದು ಸಂಜೆ 5 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣದಿಂದ ಮರವೂರುವರೆಗೆ ರೋಡ್ ಶೋ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅದರ ಪೂರ್ವಭಾವಿಯಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾವೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಪ್ರಮುಖರ ಸಭೆ ನಡೆಯಿತು. ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಮುಖರಾದ ಸತೀಶ್ ಕುಂಪಲ, ಪ್ರಭಾಮಾಲಿನಿ, ಪೂಜಾ ಪೈ ಉಪಸ್ಥಿತರಿದ್ದರು.