12:08 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಟರ್ಕಿ ಭೂಕಂಪ: ಸಾವಿನ ಸಂಖ್ಯೆ 5 ಸಾವಿರಕ್ಕೆ ಏರಿಕೆ; ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆ

07/02/2023, 17:10

ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಸಂಭವಿಸಿದ ಭಾರಿ ಭೂಕಂಪಕ್ಕೆ ಮೃತರ ಸಂಖ್ಯೆ 5 ಸಾವಿರಕ್ಕೇರಿದೆ. ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆಯಾಗಿವೆ.

ಟರ್ಕಿಯಲ್ಲಿ ಸೋಮವಾರ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಿನ್ನೆಯೇ ಸಾವಿನ ಸಂಖ್ಯೆ 2 ಸಾವಿರ ದಾಟಿತ್ತು. ಇದೀಗ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 5 ಸಾವಿರ ದಾಟಿದೆ. ಹಲವು ಮಂದಿ ಗಂಭೀರ ಸ್ವರೂಪದ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮತ್ತೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ . ಈಗಾಗಲೇ ಭಾರತವು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಎರಡು ಎನ್ ಡಿ ಆರ್ ಎಫ್ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು