2:00 AM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ಮಲಯ ಮಾರುತ ಬೆಟ್ಟ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ

08/02/2023, 18:58

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ಬುಧವಾರ ನಡೆದಿದೆ.
ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್‌ನ ಮಲಯ ಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ. ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ವರ್ಷದ ಕಡವೆ ಇದಾಗಿದ್ದು ಚಾರ್ಮಾಡಿ ಘಾಟ್ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ ಮೃತದೇಹವನ್ನು ಕಂಡು ಕೊಟ್ಟಿಗೆಹಾರ ಅರಣ್ಯ ಚೆಕ್‌ಪೋಸ್ಟ್ ಗೆ
ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು