11:38 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಅಮರಾವತಿ: ಟ್ಯಾಂಕರ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವನೆ; 7 ಮಂದಿ ಕಾರ್ಮಿಕರು ದಾರುಣ ಸಾವು

09/02/2023, 21:23

ಕಾಕಿನಾಡ(reporterkarnataka.com): ಅಮರಾವತಿ ಜಿಲ್ಲೆಯ ಪೆದ್ದಾಪುರಂ ಮಂಡಲದ ಜಿ.ರಾಗಂಪೇಟೆಯಲ್ಲಿರುವ ಖಾದ್ಯ ತೈಲ ತಯಾರಿಕಾ ಕಂಪನಿಯೊಂದರ ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಸೇವಿಸಿ 7 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡ ದಾರುಣ ಘಟನೆ ನಡೆದಿದೆ.

ಮೃತರನ್ನು ವೇಚಂಗಿ ಕೃಷ್ಣ, ವೆಚ್ಚಂಗಿ ನರಸಿಂಹಂ, ವೇಚಂಗಿ ಸಾಗರ್, ಕೊರತಾಡು ಬಂಜಿ ಬಾಬು, ಕರ್ರಿ ರಾಮರಾವ್, ಪ್ರಸಾದ್ ಮತ್ತು ಕಟ್ಟಮುರಿ ಜಗದೀಶ್ ಎಂದು ಗುರುತಿಸಲಾಗಿದೆ.

ಅಂಬಟಿ ಸುಬ್ಬಣ್ಣ ಎಣ್ಣೆ ಕಾರ್ಖಾನೆ ಆವರಣದಲ್ಲಿ ಈ ಘಟನೆ ನಡೆದಿದೆ. ಕಾರ್ಮಿಕರು 24 ಅಡಿ ಆಳದ ತೈಲ ಟ್ಯಾಂಕರ್ ಸ್ವಚ್ಛಗೊಳಿಸಲು ಒಬ್ಬೊಬ್ಬರಾಗಿ ಪ್ರವೇಶಿಸಿದ್ದು, ಅದರಲ್ಲಿದ್ದ ವಿಷಕಾರಿ ಅನಿಲವನ್ನು ಸೇವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ 5 ಮಂದಿ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪಾಡೇರು ನಿವಾಸಿಗಳಾಗಿದ್ದು, ಇಬ್ಬರು ಅದೇ ಮಂಡಲದ ಪುಲಿಮೇರು ಗ್ರಾಮದವರು ಎಂದು ತಿಳಿದು ಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ರವೀಂದ್ರನಾಥ ಬಾಬು, ಜಿಲ್ಲಾಧಿಕಾರಿ ಕೃತಿಕಾ ಶುಕ್ಲಾ ಕೂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ತೈಲ ಕಾರ್ಖಾನೆಯ ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು