7:56 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಫೆಬ್ರವರಿ 11: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ದ.ಕ.ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ, ಚಿಣ್ಣರ ಕಲರವ

10/02/2023, 12:36

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಮತ್ತು ತಾಲೂಕು ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಫೆಬ್ರವರಿ 11ರಂದು ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ್ ಸ್ಕೌಟ್ ಮತ್ತು ಗೈಡ್ನ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ ರಾಜ್ ಕೆ. ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ನೂತನ ಅಧ್ಯಕ್ಷೆ ಹಾಗೂ ನ್ಯಾಯವಾದಿ ಪರಿಮಳ ಮಹೇಶ್ ರಾವ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಶ್ರಾಂತ ಕನ್ನಡ ಉಪನ್ಯಾಸಕ ಎಸ್.ಪಿ. ಅಜಿತ್ ಪ್ರಸಾದ್,NSCDF ಅಧ್ಯಕ್ಷ ಗಂಗಾಧರ್ ಗಾಂಧಿKSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಮತ್ತಿತರರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ದಕ್ಷಿಣ ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಶಾಲಾ ಮಕ್ಕಳಿಂದ ಚಿಣ್ಣರ ಕಲರವ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ರಶ್ಮಿ ಸನಿಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು