6:37 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ ಹಕ್ಕುಪತ್ರ ನೀಡಿದ್ದೆ: ಮಾಜಿ ಶಾಸಕ ಜೆ. ಆರ್. ಲೋಬೊ

11/02/2023, 19:37

ಮಂಗಳೂರು(reporterkarnataka.com): ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ, ಕಂದಾಯ ಸರ್ವೆ ನಂಬರ್ ಕೊಡಿಸಿದೆ. ಆ ಬಳಿಕ 2400 ಮಂದಿಯಲ್ಲಿ 1500 ಮಂದಿಗೆ ಹಕ್ಕುಪತ್ರ ನೀಡಲಾಗಿತ್ತು. ಈ ಜಾಗಗಳಿಗೆ ಮನಪಾದಿಂದ ಖಾತೆಯನ್ನು ಮಾಡಿಸಲಾಗಿದ್ದು, ಈ ದಾಖಲೆಗಳ ಮೂಲಕ ಸರಕಾರದ ಸೌಲಭ್ಯ, ಮನೆಗಳಿಗೆ ಬ್ಯಾಂಕ್ ಸಾಲವನ್ನು ಕೂಡ ಪಡೆದಿದ್ದಾರೆ. ಇದೀಗ ಶಾಸಕರು ಹಳೆಯ ಹಕ್ಕುಪತ್ರಕ್ಕೆ ಸರ್ವೆ ನಂಬ್ರ ಜೋಡಿಸಿ ನೀಡುತ್ತಿದ್ದಾರೆ ಅಷ್ಟೇ. ಆದರೆ 20 ಮಂದಿಗೆ ಹಕ್ಕು ಪತ್ರ ವಿತರಣೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ಜೆ. ಆರ್. ಲೋಬೊ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಚುನಾವಣೆ ಸಮೀಪಿಸುತ್ತಿದ್ದಾಗ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬೆಂಗ್ರೆ ವ್ಯಾಪ್ತಿಯಲ್ಲಿ ಹಳೇ ಹಕ್ಕುಪತ್ರಕ್ಕೆ ಸರ್ವೆ ನಂಬರ್ ಸೇರಿಸಿ ನೀಡುತ್ತಿದ್ದು, ದೊಡ್ಡ ಸಾಧನೆ ಎಂಬ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಮಾಜಿ ಶಾಸಕರು ಟೀಕಿಸಿದರು.

ಮೀನುಗಾರರು ಮತ್ತು ಬಂದರು ಅಭಿವೃದ್ಧಿಗೋಸ್ಕರ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 2500 ಕೋಟಿ ರೂ. ಅನುದಾನ ತಂದಿದ್ದು, ಅದರಲ್ಲಿ ಮೀನುಗಾರರ ಅಭಿವೃದ್ಧಿಗೆ ಅನುದಾನವನ್ನೇ ಮೀಸಲಿಟ್ಟಿಲ್ಲ. ಮೀನುಗಾರಿಕಾ ಬಂದರು ಅಭಿವೃದ್ಧಿಯಾಗಿಲ್ಲ, 3ನೇ ಹಂತದ ಬಂದರು ಅಭಿವೃದ್ಧಿ ಕೆಲಸ ಸ್ಥಗಿತಗೊಂಡಿದೆ. ಮೀನುಗಾರರ ಬಗ್ಗೆ ಕಾಳಜಿಯಿದ್ದರೆ ಸ್ಮಾರ್ಟ್ ಸಿಟಿಯಲ್ಲಿ ಅನುದಾನ ಮಿಸಲಿಡಬೇಕಿತ್ತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆ. ಸಲೀಂ, ಶೇಖರ್ ಸುವರ್ಣ, ಚೇತನ್ ಬೆಂಗ್ರೆ, ನವೀನ್ ಕರ್ಕೇರ, ಸತೀಶ್ ಕೋಟ್ಯಾನ್, ಕವಿತಾ ವಾಸು, ಅಬ್ದುಲ್, ಶರೀಫ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು