4:08 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಜೂಜು ಕೇಂದ್ರ,‌ ಅಕ್ರಮಗಳ ನಿಯಂತ್ರಿಸಲಾಗದ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಿ: ಡಿವೈಎಫ್ಐ ಆಗ್ರಹ

13/02/2023, 13:44

ಮಂಗಳೂರು(reporterkarnataka.com): ಬಡವರ ಬದುಕನ್ನು ಬಲಿಪಡೆಯುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ,ಜುಗಾರಿ ಅಡ್ಡೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಇವುಗಳ ವಿರುದ್ದ ಯಾವುದೇ ಕ್ರಮಕೈಗೊಳ್ಳದೆ ಕೇವಲ ನಾಟಕೀಯ ಬೆಳವಣೆಗೆ ರೀತಿಯಲ್ಲಿ ಕೆಲದಿನಗಳಿಗಷ್ಟೇ ಬಾಗಿಲು ಮುಚ್ಚಿಸಿ ಈಗ ಮತ್ತೆ ಯಥಾಸ್ಥಿತಿ ಪ್ರಾರಂಭಗೊಂಡಿದೆ. ಈ ರೀತಿ ರಾಜಾರೋಷವಾಗಿ ನಡೆಯುತ್ತಿರುವ ಜೂಜು ಕೇಂದ್ರಗಳ ಮೇಲೆ ಕ್ರಮಕೈಗೊಳ್ಳಲಾಗದ ಮಂಗಳೂರು ನಗರ ಪೊಲೀಸ್ ಆಯುಕ್ತರ ವರ್ಗಾವಣೆ ಮಾಡುವಂತೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಜೂಜುಕೇಂದ್ರಗಳಿಗೆ ಶಾಶ್ವತ ಬಾಗಿಲು ಮುಚ್ಚಲು ಕ್ರಮಕೈಗೊಳ್ಳಲು ಸಾಧ್ಯವಾಗದ ಪೊಲೀಸ್ ಆಯುಕ್ತರನ್ನು ವರ್ಗಾವಣೆಗೊಳಿಸಿ ದಕ್ಷ ಅಧಿಕಾರಿಯನ್ನು ನೇಮಿಸಬೇಕೆಂದು ಡಿವೈಎಫ್ಐ ಒತ್ತಾಯಿಸಿದೆ.
ಮಂಗಳೂರು ಪೊಲೀಸ್ ಕಮೀಷನರೇಟ್ ವ್ತಾಪ್ತಿಯಲ್ಲಿ ಸ್ಕಿಲ್ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳು ರಾಜರೋಷವಾಗಿ ನಡೆಯುತ್ತಿದ್ದು ಈ ಬಗ್ಗೆ ಹಲವಾರು ಬಾರಿ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೂ ಪೊಲೀಸ್‌ ಇಲಾಖೆ ಅವುಗಳ ನಿಯಂತ್ರಿಸಲು ಯಾವೊಂದು ಕ್ರಮಗಳನ್ನು ಕೈಗೊಳ್ಳದೇ ಇದ್ದಾಗ ಡಿವೈಎಫ್ಐ‌ ಸಂಘಟನೆ ನಗರ ಜೂಜುಕೇಂದ್ರಗಳಿಗೆ ಮುತ್ತಿಗೆ ಹಾಕಿ ಸಾಂಕೇತಿಕ ಪ್ರತಿಭಟನೆ ನಡೆಸಿ ಇಲಾಖೆಯ ಗಮನಕ್ಕೆ ತಂದು ಮುಂದೆ ಈ ಜೂಜುಕೇಂದ್ರಗಳು ಶಾಶ್ವತವಾಗಿ ಮುಚ್ಚಬೇಕೆಂದು ನಗರದ ಮಿನಿವಿಧಾನ ಸೌಧದ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಂಡು ಒತ್ತಾಯಿಸಲಾಗಿತ್ತು. ಈ ನಡುವೆ ಕೆಲವು ದಿನಗಳ ಕಾಲ ಬಾಗಿಲು ಮುಚ್ಚಿಸಿದ ಪೊಲೀಸ್ ಇಲಾಖೆ ಈಗ ಮತ್ತೆ ಬಾಗಿಲು ತೆರೆದಿರುವ ಜೂಜುಕೇಂದ್ರಗಳ ಮೇಲೆ ಕ್ರಮಕೈಗೊಳ್ಳದೇ ಇರಲು ಕಾರಣ ಏನು? ಎಲ್ಲಾ ಜೂಜು ಕೇಂದ್ರಗಳಿಗೆ ಬಾಗಿಲು ಮುಚ್ಚಿಸಿದ್ದೇವೆಂದು ಮಾಧ್ಯಮದ ಮುಂದೆ ಉತ್ತರಿಸಿದ ಆಯುಕ್ತರು ಈಗ ಮತ್ತೆ ಬಾಗಿಲು ತೆರೆದಿರುವ ಜೂಜುಕೇಂದ್ರಗಳ ಬಗ್ಗೆ ಏನನ್ನುತ್ತಾರೆ? ಪೊಲೀಸರು ಬಾಗಿಲು ಮುಚ್ಚಿಸಿದ ನಂತರ ಮತ್ತೆ ಬಾಗಿಲು ತೆರೆಯುವಷ್ಟು ಧೈರ್ಯ ಈ ಜೂಜುಕೇಂದ್ರ ನಡೆಸುವ ಮಾಫಿಯಾಗಳಿಗೆ ಎಲ್ಲಿಂದ ಬಂತು? ನಗರದಲ್ಲಿ ಇಂತಹ ಜೂಜು ಕೇಂದ್ರ ರಾಜಾರೋಷವಾಗಿ ನಡೆಯುತ್ತಿರುವುದರ ಹಿಂದೆ ಪೊಲೀಸ್ ಇಲಾಖೆಯ ಸಹಕಾರಗಳಿವೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಬಲವಾಗಿ ಕೇಳಿ ಬರುತ್ತಿವೆ. ಇಂತಹ ಆರೋಪಗಳಿಗೆ ಪೊಲೀಸ್ ಆಯುಕ್ತರು ಯಾಕೆ ಉತ್ತರಿಸುತ್ತಿಲ್ಲ?. ಸದ್ರಿ ನಗರದಲ್ಲಿ ಕಾನೂನು ಸುವ್ಯವಸ್ಥೆಯ ದಯನೀಯ ವೈಫಲ್ಯದಿಂದ ಹಾಡುಹಗಲೇ ಕೊಲೆ, ಸುಲಿಗೆ, ದರೋಡೆಯಂತಹ ಘಟನೆಗಳು ನಡೆಯುತ್ತಿದ್ದು ಇವುಗಳನ್ನೆಲ್ಲಾ ನಿಯಂತ್ರಿಸಲಾಗದ ಪೊಲೀಸ್ ಇಲಾಖೆಯ ಕಾರ್ಯವೈಖರಿಯಿಂದ ಮಂಗಳೂರಿನ ಜನತೆ ಪೊಲೀಸರ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರು ಇಷ್ಟೊಂದು ಜನವಿರೋಧಿಯಾಗಿ ವರ್ತಿಸಬಾರದು.

ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಕೂಡಲೇ ರಾಜಾರೋಷವಾಗಿ ನಡೆಯುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್‌ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಕ್ರಮಕೈಗೊಳ್ಳಬೇಕು ಅಸಾಧ್ಯವಾದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ವರ್ಗಾವಣೆಗೊಳಿಸಿ ದಕ್ಷ ಅಧಿಕಾರಿಯನ್ನು ನೇಮಿಸಲಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಒತ್ತಾಯಿಸಿದೆ ಎಂದು ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು