6:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊರೊನಾ ನಡುವೆಯೆ ಮತ್ತೊಂದು ವೈರಸ್ ಆತಂಕ : ಕೇರಳದಲ್ಲಿ ಪತ್ತೆಯಾಯಿತು ಜಿಕಾ .!

09/07/2021, 15:33

Reporterkarnataka.com
ಕೊರೊನಾ ವೈರಸ್ ಎರಡನೆಯ ಅಲೆ ನಿಯಂತ್ರಣಕ್ಕೆ ಬರುವ ಮೊದಲೆ ಕೇರಳಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಒಂದು ಕಾಲದಲ್ಲಿ ಜಗತ್ತಿನಾದ್ಯಂತ ಭೀತಿ ಮೂಡಿಸಿದ್ದ ಜಿಕಾ ವೈರಸ್‌ ಮತ್ತೆ ಕಾಣಿಸಿಕೊಂಡಿದ್ದು, ಸೊಳ್ಳೆಯಿಂದ ಹರಡುವ ವೈರಾಣು ಸೋಂಕುವಿನ ಮೊದಲ ಪ್ರಕರಣ ದೃಢಪಟ್ಟಿದೆ.

ಜಿಕಾ ವೈರಸ್ ಪಾಸಿಟಿವ್ ಎಂದು ಶಂಕಿಸಲಾಗಿರುವ 13 ಪ್ರಕರಣಗಳ ಮಾದರಿಗಳನ್ನು ಪುಣೆಯಲ್ಲಿನ ರಾಷ್ಟ್ರೀಯ ವೈರಾಣು ಸಂಸ್ಥೆಗೆ ರವಾನಿಸಲಾಗಿತ್ತು. ಇದರಲ್ಲಿ ತಿರುವನಂತಪುರಂನ ಪರಸ್ಸಲ ಮೂಲದ 24 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜ್ವರ, ದೇಹದಲ್ಲಿ ತುರಿಕೆ ಹಾಗೂ ಉರಿ ಅನುಭವದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ಈ ಗರ್ಭಿಣಿ ಜೂನ್ 28ರಂದು ದಾಖಲಾಗಿದ್ದರು. ಪ್ರಸವದ ಕೊನೆಯ ವಾರಗಳಲ್ಲಿದ್ದ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಆ ಮಗು ಆರೋಗ್ಯಯುತವಾಗಿದೆ. ಆದರೆ, ಮಹಿಳೆಯಲ್ಲಿ ಜಿಕಾ ವೈರಸ್ ಸೋಂಕು ಖಚಿತವಾಗಿದೆ. ಈ ಮಹಿಳೆ ಕೇರಳ – ತಮಿಳುನಾಡು ಗಡಿ ಸಮೀಪದಲ್ಲಿ ವಾಸಿಸುತ್ತಿದ್ದಾಳೆ. ಆದರೆ ಆಕೆಗೆ ಯಾವುದೇ ಪ್ರಯಾಣ ಇತಿಹಾಸವಿಲ್ಲ. ಆಕೆ ಜ್ವರದಿಂದ ಆಸ್ಪತ್ರೆಗೆ ದಾಖಲಾಗುವ ಒಂದು ವಾರಕ್ಕೂ ಮುನ್ನ ಆಕೆಯ ತಾಯಿ ಕೂಡ ಅದೇ ರೀತಿಯ ಲಕ್ಷಣಗಳೊಂದಿಗೆ ಜ್ವರಕ್ಕೆ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು