12:07 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ನೀರುಮಾರ್ಗ: ಕಾಂಗ್ರೆಸ್ ನಿಂದ ಸಾರ್ವಜನಿಕ ಸೇವೆಗೆ ಉಚಿತ ಆಂಬುಲೆನ್ಸ್ ಲೋಕಾರ್ಪಣೆ

09/07/2021, 16:33

ಸುರತ್ಕಲ್ (reporterkarnataka news): ನೀರುಮಾರ್ಗ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ನೀರುಮಾರ್ಗ ಜಂಕ್ಷನ್ ಬಳಿ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಭೇದವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಜನಸೇವೆಯನ್ನು ಮಾಡುತ್ತಿವೆ. 

 ಜನಸೇವೆ ಮಾಡಲು ಅಧಿಕಾರವಿರಬೇಕೆಂದಿಲ್ಲ. ಮಾನವೀಯ ಗುಣ ಮುಖ್ಯವಾಗುತ್ತದೆ. ಈ ಭಾಗದ ಪುಟ್ಟ ಬಾಲಕಿ ಕ್ಲಾವಿಯ ಅಗ್ನೇಲ್ ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದು ಅವಳ ಹೆತ್ತವರ ಆಸೆಯಂತೆ ಇಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ನೀರುಮಾರ್ಗದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಜನರಿಗೆ ನೆರವು ನೀಡುವ ಉದ್ದೇಶದಿಂದ ತಿಂಗಳ ಹಿಂದೆ ಆಂಬುಲೆನ್ಸ್ ಸೇವೆ ಪ್ರಾರಂಭ ಮಾಡಿದ್ದೆವು. ಬಡವರ್ಗದ ಜನರು ತುರ್ತು ಸಂದರ್ಭದಲ್ಲಿ ಸಮಸ್ಯೆ ಎದುರಿಸಬಾರದು ಎಂಬ ದೃಷ್ಟಿಯಿಂದ ಈ ಸೇವೆಯನ್ನು ಪ್ರಾರಂಭ ಮಾಡುತ್ತಿದ್ದೇವೆ. ಅಧಿಕಾರ ಇದ್ದಾಗ ಮಾತ್ರ ಜನರ ಜೊತೆಯಿದ್ದರೆ ಸಾಲದು. ಅಧಿಕಾರವಿಲ್ಲದಿದ್ದರೂ ಜನರ ಜೊತೆ ನಿಲ್ಲಬೇಕು ಎಂದು ಹೇಳಿದರು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇವಲ ರಾಜಕಾರಣ ಮಾಡದೇ ಅನೇಕ ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ 20 ಕಡೆಗಳಲ್ಲಿ ರಕ್ತದಾನ ಮಾಡಿ 2500 ಯುನಿಟ್ ರಕ್ತ ಸಂಗ್ರಹ ಮಾಡಿದ್ದಲ್ಲದೆ ಆಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಜನರಿಗೆ ನೆರವಾಗಿದೆ. ತುರ್ತು ಸೇವೆಗೆ ಆಂಬುಲೆನ್ಸ್ ಗೆ ಕೈಜೋಡಿಸಿದ ಎಲ್ಲರ ಕಾರ್ಯ ಶ್ಲಾಘನೀಯವೆಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗುರುಪುರ ವಲಯ ಅಧ್ಯಕ್ಷ ಸುರೇಂದ್ರ ಕಾಂಬ್ಳಿ ಧರ್ಮ ಗುರು ಫಾ. ಜೋಸೆಫ್ ಮಸ್ಕರೇನಸ್, ಧರ್ಮಗುರು‌ ಜಿ ಐ ಎಸ್ ಇಸ್ಮಾಯಿಲ್, ಸಮಾಜ ಸೇವಕ ಎಮ್ ಪ್ರೇಮಚಂದ್ರ ಭಟ್, ನೀರುಮಾರ್ಗ ಗ್ರಾಮ ಪಂಚಾಯತ್ ಅಧ್ಯಕ್ಷೆ ಧನವಂತಿ, ನೀರುಮಾರ್ಗ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ‌ ಯಶೋಧ ಜೆ ಸಾಲ್ಯಾ‌ನ್ ಉಪಸ್ಥಿತರಿದ್ದರು.

ಶ್ರೀಧರ್ ಸ್ವಾಗತಿಸಿದರು. ಸಂತೋಷ್ ಡಿ ಪಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು