ಇತ್ತೀಚಿನ ಸುದ್ದಿ
ಸಚಿವ ಡಾ. ಅಶ್ವತ್ಥನಾರಾಯಣ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು: ಐವನ್ ಡಿಸೋಜ
17/02/2023, 18:36
ಮಂಗಳೂರ(reporterkarnataka.com): ಟಿಪ್ಪು ಸುಲ್ತಾನ್ ನ ಹೊಡೆದು ಹಾಕಿದ ರೀತಿಯಲ್ಲಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಡಾ. ಅಶ್ವತ್ಥನಾರಾಯಣ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಆಗ್ರಹಿಸಿದರು.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಅಶ್ವತ್ಥ ನಾರಾಯಣ ವಿರುದ್ಧ ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಲಾಗಿದೆ. ಸಚಿವರೊಬ್ಬರು ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸ್ವಯಂ ಪ್ರೇರಿತ ಪೊಲೀಸರು ಪ್ರಕರಣ ದಾಖಲಿಸಬೇಕು. ರಾಜ್ಯಪಾಲರು ಈ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಬೇಕು ಎಂದ ಒತ್ತಾಯಿಸಿದರು.
ಸಚಿವ ಡಾ.ಅಶ್ವತ್ಥನಾರಾಯಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಹಾಗೂ ಪೊಲೀಸರು ಅವರನ್ನು ಬಂಧನ ಮಾಡುವವರಿಗೆ ಕಾಂಗ್ರೆಸ್ ಪ್ರತಿಭಟನೆ ಮುಂದುವರೆಸಿಲಿದೆ. ಟಿಪ್ಪುವಿನ ಬಗ್ಗೆ ಜನರಲ್ಲಿ ದ್ವೇಷ ಭಾವನೆ ಮೂಡಿಸುತ್ತಿರುವ ಸಚಿವ ಅಶ್ವತ್ಥನಾರಾಯಣ ಅವರು, ಟಿಪ್ಪು ಪುಸ್ತಕ ಬಿಡುಗಡೆಗೊಳಿಸಿದ ಜಗದೀಶ್ ಶೆಟ್ಟರ್, ಟಿಪ್ಪು ಪೋಷಾಕು ಧರಿಸಿದ ಯಡಿಯೂರಪ್ಪರಿಗೂ ಸಿದ್ದರಾಮಯ್ಯರ ವಿರುದ್ಧ ನೀಡಿದ ಹೇಳಿಕೆ ನೀಡುತ್ತಾರಾ ಎಂದು ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ಮುಖಂಡ ಕೋಡಿಜಾಲ್ ಇಬ್ರಾಹಿಂ, ಅಪ್ಪಿ, ಪ್ರಕಾಶ್ ಸಾಲ್ಯಾನ್, ಭಾಸ್ಕರ ರಾವ್, ಸಬಿತಾ ಮಿಸ್ಕಿತ್, ಮುಸ್ತಾಫ, ಮೀನಾ ಟೆಲ್ಲೀಸ್, ಸಲೀಂ, ಆಲಿಸ್ಟನ್ ಇದ್ದರು.














