ಇತ್ತೀಚಿನ ಸುದ್ದಿ
ಸರ್ವಸ್ಪರ್ಶಿ, ಸರ್ವವ್ಯಾಪಿ ಬೊಮ್ಮಾಯಿ ಬಜೆಟ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮೆಚ್ಚುಗೆ
17/02/2023, 20:38
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್ ಆಶಯ ಬಿಂಬಿಸುವ ಬಜೆಟ್ ಆಗಿದೆ. ಇದು ಸರ್ವಸ್ಪರ್ಶಿ, ಸರ್ವವ್ಯಾಪಿಯಾಗಿರುವ ಬಜೆಟ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಗೃಹಿಣಿ ಶಕ್ತಿ ಯೋಜನೆ, ಮೂಲಸೌಲಭ್ಯ, ನೀರಾವರಿಗೆ ಕೊಟ್ಟಿರುವ ವಿಶೇಷ ಯೋಜನೆ ಜನರಲ್ಲಿ ಹೊಸ ಭರವಸೆ ಮೂಡಿಸಿದೆ. ಇದು ಅಭಿವೃದ್ಧಿ ಕರ್ನಾಟಕದ ಆಶಯದ ಬಜೆಟ್.
ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ಮಾಡಿ ಅಂತ ಕೇಳಿದ್ದೆ. ಅದರಲ್ಲಿರುವ ತಾಂತ್ರಿಕ ತೊಡಕಿನ ಬಗ್ಗೆ ನನಗೆ ತಿಳಿಸಿದ್ದಾರೆ. ತಾಂತ್ರಿಕ ತೊಡಕು ನಿವಾರಿಸಿ ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ಮಾಡಿಸ್ತೇವೆ ಎಂದು ಸಿ.ಟಿ. ರವಿ ನುಡಿದರು.














