4:56 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪಿಎಚ್‌ಡಿ ಪ್ರಬಂಧ ಅನುಮೋದನೆಗೆ ಲಂಚ ಬೇಡಿಕೆ : ಮಂಗಳೂರು ವಿ ವಿ ಸಹಾಯಕ ಪ್ರಾಧ್ಯಾಪಕಿಗೆ 5 ವರ್ಷ ಶಿಕ್ಷೆ

09/07/2021, 18:44

ಮಂಗಳೂರು(Repoterkarnatakanews): ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿನಕ್ಕೊಳಗಾಗಿದ್ದ ಮಂಗಳೂರು ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಸಜೆ ವಿಧಿಸಿದೆ.
ಪಿಹೆಚ್‌ಡಿ ವಿದ್ಯಾರ್ಥಿನಿ ಪ್ರೇಮಾ ಡಿ’ಸೋಜ ಎಂಬವರಿಂದ ಮೈಸೂರಿನಿಂದ ಆಗಮಿಸುವ ಮೌಲ್ಯ ಮಾಪಕರ ಖರ್ಚು ಸೇರಿ ರೂ. 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, 2012ರ ಡಿಸೆಂಬರ್ 4 ರಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭ ರೂ. 5,000 ಮುಂಗಡ ಹಣ ಸ್ವೀಕರಿಸುತ್ತಿದ್ದಾಗಲೇ ಪ್ರೊಫೆಸರ್ ಅನಿತಾ ರವಿಶಂಕರ್‌ ಅವರನ್ನು ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ಬಂಧಿಸಿದ್ದರು.
ಸದ್ರಿ ಆರೋಪಿ ಮೊದಲು ರೂ. 10,000, ನಂತರ ರೂ.4,000, ಮತ್ತು ಬಳಿಕ ರೂ. 16,800 ನೀಡುವಂತೆ ವಿದ್ಯಾರ್ಥಿನಿ ಬಳಿ ಬೇಡಿಕೆ ಇಟ್ಟಿದ್ದರು. ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳ ಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 7ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು