6:41 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕುಂಜತ್ತಬೈಲ್: ನೂತನ ಆರೋಗ್ಯ ಸೇವೆ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

20/02/2023, 00:38

ಸುರತ್ಕಲ್(reporterkarnataka.com):
ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕುಂಜತ್ತಬೈಲ್ 13ನೇ ಉತ್ತರ ವಾರ್ಡ್ ನಲ್ಲಿ ‘ನಮ್ಮ ಕ್ಲಿನಿಕ್’ ನೂತನ ಆರೋಗ್ಯ ಸೇವೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರ ದೂರ ಇರುವ ಕಡೆ ನಮ್ಮ ಕ್ಲಿನಿಕ್ ಎಲ್ಲಾ ಸೌಲಭ್ಯ ಒದಗಿಸುವಲ್ಲಿ ಶಕ್ತವಾಗಿದೆ.


ಮಕ್ಕಳಿಂದ ಹಿರಿಯವರೆಗೆ ಅಗತ್ಯ ಹಾಗೂ ತುರ್ತು ಚಿಕಿತ್ಸೆ ನೀಡಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ದಿನವಿಡೀ ವೈದ್ಯರು ಲಭ್ಯರಿರುತ್ತಾರೆ. ಸಾಮಾನ್ಯ ಜನರು ಆರೋಗ್ಯ. ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರಕಾರ ಈ ಯೋಜನೆ ಜಾರಿಗೆ ತಂದಿದೆ ಎಂದರು.

ಡಾ.ದೃತಿ ಪ್ರಾಸ್ತಾವಿಕ ಮಾತುಗಳನ್ನಾಡಿ ಕ್ಲಿನಿಕ್ ನಲ್ಲಿ ಸಿಗುವ ಸೌಲಭ್ಯದ ಮಾಹಿತಿ ನೀಡಿದರು.

ಸ್ಥಳೀಯ ಮನಪಾ ಸದಸ್ಯರಾದ ಶರತ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವ ಡಾ.ಕಿಶೋರ್ ಕುಮಾರ್,ಆರ್ ಸಿ ಎಚ್ ಅಧಿಕಾರಿ ಡಾ.ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ಆಡಳಿತ ವೈದ್ಯಾಧಿಕಾರಿ ಡಾ.ಚೈತ್ರ ಎ.ಸಿ,ನಮ್ಮ ಕ್ಲಿನಿಕ್ ನ ಡಾ.ಧೃತಿ , ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು