12:04 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಫೆ.24: ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಹುಟ್ಟುಹಬ್ಬ, ಅಭಿವಂದನಾ ಕಾರ್ಯಕ್ರಮ, ಸವಲತ್ತು ವಿತರಣೆ

20/02/2023, 19:20

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಅಧ್ಯಕ್ಷ, ಡಾ.ಎಂ.ಎನ್. ರಾಜೇಂದ್ರ ಕುಮಾರ್ 74ನೇ ಹುಟ್ಟು ಹಬ್ಬದ ಸಂಭ್ರಮಾಚರಣೆ, ಅಭಿವಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ಫೆ.24ರಂದು ಬೆಳಗ್ಗೆ 10.30ಕ್ಕೆ ನಗರದ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿವಂದನಾ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸೋಮವಾರ ಸುದ್ದಿಗೋಷ್ಠಿಯಲ್ಲಿಈ ವಿಷಯ ತಿಳಿಸಿದರು.

ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನನ್ನು ತಾನು ತೊಡಗಿಸಿಕೊಂಡಿರುವ ‘ಸಹಕಾರ ರತ್ನ’ ಡಾ.ರಾಜೇಂದ್ರ ಕುಮಾರ್ ಅವರು ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವಲ್ಲಿ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಎಲ್ಲಾ ವರ್ಗದ 74 ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಪಿ.ಎಸ್. ಯಡಪಡಿತ್ತಾಯ ಅಭಿವಂದಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅಭಿವಂದನಾ ಭಾಷಣ ಮಾಡಲಿದ್ದಾರೆ ಎಂದು ಅವರು ವಿವರಿಸಿದರು.

ಇದೇ ಸಂದರ್ಭ 74 ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯನ್ನು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹಾಗೂ ಹೊಸ ದಿಗಂತ ಪತ್ರಿಕೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಪಿ.ಎಸ್.ನೆರವೇರಿಸಲಿದ್ದಾರೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಎಸ್.ಕೋಟ್ಯಾನ್, ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ. ರಾಜಾರಾಮ ಭಟ್, ಎಂ.ವಾದಿರಾಜ ಶೆಟ್ಟಿ, ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ, ಎಸ್.ಬಿ. ಜಯರಾಮ್ ರೈ, ಮೋನಪ್ಪ ಶೆಟ್ಟಿ, ಹರಿಶ್ಚಂದ್ರ, ಕೆ.ಜೈರಾಜ್ ಬಿ ರೈ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಅಶೋಕ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು