11:56 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಮಾಜದ ಕಟ್ಟ ಕಡೆಯರಿಗೂ ನಾಗರಿಕ ಸೌಲಭ್ಯ ಕಲ್ಪಿಸುವ ಗುರಿ ಪ್ರಧಾನಿ ಮೋದಿ ಅವರದ್ದು: ಸಚಿವ ಅಶ್ವಥ್ ನಾರಾಯಣ್

21/02/2023, 20:53

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜದ ಕಟ್ಟ ಕಡೆಯವರಿಗೂ ನಾಗರೀಕ ಸೌಲಭ್ಯ ದೊರಕುವಂತೆ ದೂರದೃಷ್ಟಿಯ ಯೋಜನೆ, ಜಾರಿಗೊಳಿಸಿದ ಏಕೈಕ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು.

ಅವರು ನಾಗಮಂಗಲ ತಾಲೂಕು ಭಾರತೀಯ ಜನತಾ ಪಾರ್ಟಿ ಆಯೋಜನೆ ಮಾಡಿದ್ದ ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಚಿಂತನೆ ಸಾಧನೆ ಸೇವೆಗಳು ಗುಜರಾತ್ ಮುಖ್ಯಮಂತ್ರಿ ಆಗಿ ಜನಪರ ಕಾಳಜಿ ಅಂದಿನ ಯೋಜನೆ ಇಂದು ಇಡೀ ದೇಶವ್ಯಾಪಿ ಪ್ರಧಾನಮಂತ್ರಿಯಾಗಿ ಅವರ ದೂರದೃಷ್ಟಿಯ ಅಭಿವೃದ್ಧಿ ಯೋಜನೆ ಜಾರಿಗೆ ತಂದಿರುವುದು ಅವರ ಅಭಿವೃದ್ಧಿ ಚಿಂತನೆಗೆ ಸಾಕ್ಷಿ ಭೂತವಾಗಿದೆ.

ಪ್ರತಿ ಮನೆಮನೆಗೂ ಕುಡಿಯುವ ನೀರಿನ ಜಲಜೀವನ್ ಮಿಷನ್ ಇಂದು ನಾಗಮಂಗಲ ತಾಲೂಕಿನ ಜನತೆಗೆ ದೊರಕಿರುವ ಬೃಹತ್ ಕುಡಿಯುವ ನೀರಿನ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ, ನಿರೀಕ್ಷಿತ ಮಟ್ಟದಲ್ಲಿ ಕಟ್ಟಕಡೆಯ ಭಾಗಕ್ಕೂ ನೀಡುವ ಕೆಲಸವಾಗಿದೆ.
ವಿಶ್ವದ ತಂತ್ರಜ್ಞಾನ ಮಾದರಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೊರಕುವಂತಹ ಸೌಲಭ್ಯಗಳು ಭಾರತ ತನ್ನ ಕೌಶಲ್ಯಾಭಿವೃದ್ಧಿ ಯೋಜನೆಗೆ ಮೋದಿಯವರು ನೀಡಿರುವ ಅನೇಕ ಕೆಲಸಗಳು ನಮ್ಮ ಮುಂದಿವೆ ಎಂದು ತಿಳಿಸಿದರು.
ಮುಂದುವರೆದ ದೇಶಗಳಲ್ಲಿ ಸಾಧನೆ ಆಗದೆ ಇದ್ದಂತಹ ಕೆಲಸಗಳನ್ನು ನರೇಂದ್ರ ಮೋದಿಜಿ ಅವರು ಅಭಿವೃದ್ಧಿಯ ಪಥವನ್ನು ಮುನ್ನಡೆಸಿದ್ದಾರೆ.
ಈ ಬಾರಿ ನಿಮ್ಮ ನಡೆ ನಮ್ಮೆಲ್ಲರ ಸಹಕಾರ ಭಾರತೀಯ ಜನತಾ ಪಾರ್ಟಿಯ ಬೆಂಬಲಿಸುವ ಮುಖಾಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬೆಂಬಲಿಸಬೇಕೆಂದು ತಿಳಿಸಿದರು.

ಸಮಾರಂಭದಲ್ಲಿ ರಾಜ್ಯ ಹಿರಿಯ ಬಿಜೆಪಿ ಉಪಾಧ್ಯಕ್ಷರಾದ ನಿರ್ಮಲ್ ಕುಮಾರಸುರಾನ. ಮಾರುತಿರಾವ್. ಪವರ್ ಜಿಲ್ಲಾಧ್ಯಕ್ಷರಾದ ಉಮೇಶ್ ರವರುಗಳು ಮಾತನಾಡಿದರು.

ಸಮಾರಂಭದಲ್ಲಿ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ್ ಫೈಟರ್ ರವಿ ಅಧ್ಯಕ್ಷರಾದ ಗೀತಾ ವಿವೇಕಾನಂದ ಹಾಗೂ ಬಿಜೆಪಿ ಮುಖಂಡರಾದ ವಿಷ್ಣುಮೂರ್ತಿ ಭಟ್ ರವರು ಹಾಗೂ ಮಹಿಳಾ ಮುಖಂಡರು ಹಾಗೂ ಅನೇಕ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು