ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮಾಂಸ ತಿಂದು ದೇಗುಲಕ್ಕೆ ಹೋದ ಆರೋಪ; ಬಿಜೆಪಿಯ ಸಿ.ಟಿ. ರವಿ ವಿರುದ್ಧ ಜೆಡಿಎಸ್ ಪ್ರತಿಭಟನೆ
23/02/2023, 17:20
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಾಂಸ ತಿಂದು ದೇವಾಲಯಕ್ಕೆ ಹೋದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ವಿರುದ್ಧ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು ತೊಲಗಲಿ, ತೊಲಗಲಿ ಸಿ.ಟಿ.ರವಿ ತೊಲಗಲಿ ಎಂದು ಘೋಷಣೆ ಕೂಗಿದರು.
ಹಿರಿಯರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.



ಶಾಸಕ ಸಿ.ಟಿ. ರವಿ ಹೇಳುವುದು ಒಂದು, ಮಾಡುವುದು ಇನ್ನೊಂದು.
ಹಿರಿಯ ರಾಜಕಾರಣಿಗಳಿಗೆ ಗೌರವ ಕೊಡಲಿಲ್ಲ ಅದಕ್ಕೆ ತಕ್ಕ ಶಾಸ್ತಿ ಎಂದು ಪ್ರತಿಭಟನಾಕಾರರು ನುಡಿದರು.














