6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮಣಿಪಾಲದ ಪ್ರೊಫೆಸರ್ ನೇಣು ಬಿಗಿದು ಆತ್ಮಹತ್ಯೆ: 4 ದಿನಗಳ ಬಳಿಕ ಘಟನೆ ಬೆಳಕಿಗೆ

24/02/2023, 13:44

ಮಣಿಪಾಲ(reporterkarnataka.com): ಮಣಿಪಾಲ ದಶರಥನಗರದ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರೊಫೆಸರ್ ಒಬ್ಬರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ.

ಮೃತರನ್ನು ಉತ್ತರಪ್ರದೇಶದ ಅಹಮದ್ ಮಿರ್ಜಾ(38) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಆರ್ಕಿಟೆಕ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರೊಫೆಸರ್ ಮೃತಪಟ್ಟು ನಾಲ್ಕು ದಿನ ಕಳೆದಿರಬಹುದೆಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಎಸ್ಐ ನವೀನ್ ನಾಯ್ಕ್, ಹೆಡ್ ಕಾನ್ಸ್ಟೇಬಲ್ ಸುಕುಮಾರ್, ಕಾನ್ಸ್ಟೇಟಬಲ್ ಉಮೇಶ್ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರೀಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

ಇತ್ತೀಚಿನ ಸುದ್ದಿ

ಜಾಹೀರಾತು