3:01 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆಶಿಲಾನ್ಯಾಸ

24/02/2023, 21:10

ಮಂಗಳೂರು(reporterkarnataka.com): ಎಕ್ಕೂರಿನ ಶ್ರೀ ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡದ ಕಾಮಗಾರಿಗೆ ಇಂದು ಶಿಲಾನ್ಯಾಸವನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್‍‌ ಜಯಾನಂದ ಅಂಚನ್ ಅವರು, ನಗರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ಬೆಂಬಲ, ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಪಾಲಿಕೆಯ ಎಲ್ಲ ಅಭಿವೃದ್ಧಿ ಯೋಜನೆಗಳಿಗೂ ಶಾಸಕರು ಸಕ್ರಿಯವಾಗಿ ಬೆಂಬಲ ನೀಡುತ್ತಿದ್ದು, ಸರಕಾರದಿಂದ ವಿವಿಧ ಇಲಾಖೆಗಳ ಮೂಲಕ ಅನುದಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ನಂದಾದೀಪ ಮಹಿಳಾ ಮಂಡಳಿಯ ಅಧ್ಯಕ್ಷರಾದ ತೇಜಸ್ವಿನಿ , ಮುಖಂಡರಾದ ಕಿರಣ್ ರೈ, ಯಶೋಧರ ಚೌಟ, ಮನೋಹರ್.ಕೆ, ಜಯ ಶೆಟ್ಟಿ, ವಿಜಯನ್, ರೇಖಾ ಶೆಟ್ಟಿ, ಸುಜಾತ ಕೊಟ್ಟಾರಿ, ಸುಕೇಶ್, ಪ್ರವೀಣ್ ಎಕ್ಕೂರು, ರವಿ ಎಕ್ಕೂರು, ಸುನಿತಾ ಶೆಟ್ಟಿ, ಹೇಮಲತಾ, ಚಿತ್ರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು