2:05 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಎರ್ಮೆಮಜಲು ಯುವ ಕೇಸರಿ ಭವನ ಲೋಕಾರ್ಪಣೆ: ಡಾ. ಪ್ರಭಾಕರ್ ಭಟ್ ಉದ್ಫಾಟನೆ

28/02/2023, 19:35

ಬಂಟ್ವಾಳ(reporterkarnataka.com):
ಕೇಸರಿಯ ಗುರುತೆ ತ್ಯಾಗ ಮತ್ತು ಸೇವೆ. ಆದುದರಿಂದ ತಮ್ಮ ಸಂಘಟನೆಯ ಹೆಸರಿಗೆ ತಕ್ಕಂತೆ ಹಿಂದೂ ಸಮಾಜದ ಉದ್ಧಾರಕ್ಕಾಗಿ ತ್ಯಾಗ ಹಾಗೂ ಸಮಾಜ ಸೇವೆಯಲ್ಲಿ ನಿರತರಾಗಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಅವರು ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು (ರಿ) ಇದರ ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಾಣವಾದ “ಯುವ ಕೇಸರಿ ಭವನ” ವನ್ನು ದ್ವೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿ ಮಾತನಾಡಿದರು.


ಹಿಂದೂ ಸಮಾಜ ಜಾತಿಭೇದ ಬಿಟ್ಟು ಒಂದಾಗಬೇಕು. ಯುವ ಕೇಸರಿ ಫ್ರೆಂಡ್ಸ್ ಸಂಘಟನೆಯು ಕನಿಷ್ಠ ಪಕ್ಷ ತಮ್ಮ ಗ್ರಾಮ ವ್ಯಾಪ್ತಿ ಯಲ್ಲಿ ಆದರೂ ಹಿಂದೂ ಸಮಾಜದ ಯಾವುದೇ ಒಂದು ಮನೆ ಮುಳಿಹುಲ್ಲಿನ ಮನೆ, ವಿದ್ಯುತ್ ಶಕ್ತಿ ಇಲ್ಲದ ಮನೆ, ಕನಿಷ್ಠ ಪಕ್ಷ ಮನೆಯಲ್ಲಿರುವ ವಿದ್ಯಾರ್ಥಿಗಳು ಪಿಯುಸಿ ತನಕ ವಿದ್ಯಾಭ್ಯಾಸ, ಯಾವುದೇ ರೋಗ ಬಾದೆಯಿಂದ ಔಷಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇರದಂತೆ ಇರುವಂತೆ ನೋಡಿಕೊಳ್ಳಬೇಕು, ಸಮಾಜದ ಒಳಿತಿದಗಾಗಿ ರಕ್ತದಾನ,ಕಣ್ಣು ದಾನ, ಅಂಗಾಂಗ ದಾನಗಳ ಬಗ್ಗೆ ಪ್ರಚೋದಿಸಿ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸಬೇಕು, ಆಧುನಿಕ ಆಡಂಬರಗಳನ್ನು ಬಿಟ್ಟು ಭಜನೆ ಸತ್ಕಾರ್ಯಗಳಂತ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು, ಕಾರ್ಯಕ್ರಮದ ಸಂಘಟಕರು ಕಟ್ಟಡ ಲೋಕಾರ್ಪಣೆಯ ನಿಮಿತ್ತ ಯಾವುದೇ ಆಡಂಬರ ಕಾರ್ಯಕ್ರಮ ಮಾಡದೆ ಧಾರ್ಮಿಕ ಪೂಜಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮ, ಅನ್ನದಾನ ದ ಮೂಲಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು,

ಇತ್ತೀಚಿನ ಸುದ್ದಿ

ಜಾಹೀರಾತು