6:12 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿ ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‌ ಶಿಲಾನ್ಯಾಸ

28/02/2023, 23:46

ಮಂಗಳೂರು(reporterkarnataka.com) : ಮಹಾನಗರಪಾಲಿಕೆ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡ್‌ನ ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿಯ ಮತ್ತು ಕಲ್ಲಕಟ್ಟ ಸದಾಶಿವ ನಗರದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ ನಗರದ ವಿವಿಧ ಕಡೆಗಳಲ್ಲಿ ರಾಜಕಾಲುವೆಗಳ ತಡೆಗೋಡೆ ಮತ್ತು ಚರಂಡಿಗಳ ನಿರ್ಮಾಣಕ್ಕೆಂದೇ 100 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಈ ಮೊತ್ತದಲ್ಲಿ ಕಾಮಗಾರಿಗಳನ್ನು ಮಾಡಿಸಲು ಮುಂದಾಗಿದ್ದಾರೆ. ತಮ್ಮ ಕ್ಷೇತ್ರದ ಜನತೆ ಮಳೆಗಾಲದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕಾಳಜಿವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಗದ್ದೆ, ಬೇಸಾಯ, ಕೃಷಿ ಕಾರ್ಯಗಳು ನಡೆಯುವ ಪ್ರದೇಶಗಳಿಗೆ ಮಾತ್ರ ಸಣ್ಣ ನೀರಾವರಿ ಇಲಾಖೆಯ ಅನುದಾನ ಲಭ್ಯವಿರುತ್ತದೆ. ಆದರೆ ಮಂಗಳೂರು ನಗರದ ಜನರ ಮಳೆಗಾಲದ ಪ್ರವಾಹದ ಸಮಸ್ಯೆ ನಿವಾರಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ ಈ ಅನುದಾನ ಕೊಡಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‍‌ ಕಟೀಲು ಅವರು ಸಹಕಾರ ನೀಡಿದ್ದಾರೆ ಎಂದು ಶಾಸಕ ಕಾಮತ್‌ ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಕಾರ್ಪೊರೇಟರ್‍‌ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ, ಯಶೋಧರ್ ಚೌಟ, ಭರತ್ ರಾಜ್‌ ಶೆಟ್ಟಿ, ರೇಖಾ ಶೆಟ್ಟಿ, ಪ್ರೀತಮ್ ತೇಜಸ್ವಿನಿ, ಸುಜಾತಾ ಕೊಟ್ಟಾರಿ, ಚೇತನ್, ಸ್ನೇಹ, ಸುಕೇಶ್‌ ಅಳಪೆ , ಸುಮತಿ, ರಾಘವೇಂದ್ರ ಶೆಟ್ಟಿ, ರಾಮ್ ಎಕ್ಕೂರು, ರವೀಂದ್ರ ರಾವ್, ಕುಮಾರಣ್ಣ, ರಾಜೇಶ್ ಎಕ್ಕೂರು, ರವಿ ಎಕ್ಕೂರು, ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು