8:54 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು  ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ

11/07/2021, 08:59

ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ

info.reporterkarnataka@gmail.com

ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ.

45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 22 ವರ್ಷ ವಯಸ್ಸಿನ ಮಗ ಲೋಕೇಶ್ ನಿಂದ ಹತ್ಯೆಗೀಡಾದ ನತದೃಷ್ಟೆ. ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಆರೋಪಿ ಲೋಕೇಶ್

 ಊಟದ ವಿಚಾರದಲ್ಲಿ ತಾಯಿ ಜತೆ ಜಗಳ ತೆಗೆದಿದ್ದಾನೆ. ಬಳಿಕ ಮದ್ಯ ಸೇವನೆಗೆ ಹಣ ನೀಡುವಂತೆ ತಾಯಿಯನ್ನು ಪೀಡಿಸಿದ್ದಾನೆ. ಪ್ರತೀ ದಿನ ಈತನಿಗೆ ಹಣ ನೀಡಿ ಬೇಸತ್ತಿದ್ದ ತಾಯಿ ಮಗನ ಜೊತೆಗೆ ಈ ವಿಚಾರವಾಗಿ ಜಗಳವಾಡಿದ್ದಾರೆ. ಈ ವೇಳೆ ತಾಯಿಯ ಕೆನ್ನೆಗೆ

ಲೋಕೇಶ್ ಬಲವಾಗಿ ಬಾರಿಸಿದ್ದಾನ. ಏಟಿನ ರಭಸಕ್ಕೆ ತಾಯಿ ರತ್ನಮ್ಮ ಕಬ್ಬಿಣದ ಬಾಗಿಲಿನ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ . 

ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಮೊಳಕಾಲ್ಮೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ ಆರೋಪಿ ಲೋಕೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು