9:49 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರ: ಕಡಲನಗರಿ ಮಂಗಳೂರಿನಲ್ಲೂ ಸಾರ್ವಜನಿಕ ಸೇವೆ ಸ್ತಬ್ದ

01/03/2023, 22:24

ಮಂಗಳೂರು(reporterkarnataka.com): 7ನೇ ವೇತನ ಪರಿಷ್ಕರಣೆಗೆ ಆಗ್ರಹಿಸಿ ಕರಾವಳಿ ಜಿಲ್ಲೆ ಗಳು ಸೇರಿದಂತೆ ರಾಜ್ಯಾದ್ಯಂತ ರಾಜ್ಯ ಸರಕಾರಿ ನೌಕರರು ಬುಧವಾರ ಮುಷ್ಕರ ನಡೆಸಿದ್ದು, ಮುಷ್ಕರದ ಬಿಸಿ ಕಡಲನಗರಿ ಮಂಗಳೂರಿಗೂ ತಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗಿನಿಂದ ಸರಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಮಂಗಳೂರಿನ ಶಕ್ತಿಕೇಂದ್ರ ಮಂಗಳೂರು ಮಹಾನಗರಪಾಲಿಕೆ ಎದುರು ನೂರಾರು ಮಂದಿ ನೌಕರರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಅದೇ ರೀತಿ ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿ, ಜಿಲ್ಲಾ ಪಂಚಾಯತ್ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದರು. ಇದರಿಂದ ಸಾರ್ವಜನಿಕರಿಗೆ‌ ನೀಡುವ ಸೇವೆಯನ್ನು ಸ್ಥಗಿತಗೊಂಡಿತ್ತು. ಹೆಚ್ಚಿನ ಕಚೇರಿಗಳಲ್ಲಿ ಬೆಳಗ್ಗೆ 11.30ರ ವರೆಗೆ ಮುಷ್ಕರ ನಡೆಸಿ ಸರಕಾರಿ ಸಿಬ್ಬಂದಿಗಳು ನಂತರ ಅಲ್ಲಿಂದ ತೆರಳಿದರು. ಕೆಲವು ಅಧಿಕಾರಿಗಳು ರಜೆ ಮೇಲೆ ತೆರಳಿದ್ದರು.

ಆರೋಗ್ಯ ಇಲಾಖೆಯಲ್ಲಿ ತುರ್ತು ಸೇವೆ ಹೊರತು ಪಡಿಸಿ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿರುವುದು ಕಂಡು ಬಂತು. ಲೋಕೋಪಯೋಗಿ ಇಲಾಖೆ ಕಚೇರಿಯ ಮುಂದೆ ನೌಕರರು ಜಮಾವಣೆ ಆಗಿದ್ದರು.

ಉಳ್ಳಾಲ ತಾಲೂಕು ವ್ಯಾಪ್ತಿಯ ಸರಕಾರಿ ಶಾಲೆಗಳು ಶಿಕ್ಷಕರಿಲ್ಲದೇ ಮುಚ್ಚಿವೆ. ಬಬ್ಬುಕಟ್ಟೆ, ಕುತ್ತಾರ್, ತೊಕ್ಕೊಟು, ದೇರಳಕಟ್ಟೆ ಸರಕಾರಿ ಶಾಲೆಗಳಲ್ಲಿ ಶಿಕ್ಷಕರು ಗೈರು ಹಾಜರಾಗಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮನೆಗೆ ಮರಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು