4:53 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಗಾಜಿನ ಛಾವಣಿಯ ಮಂಗಳೂರು- ಬೆಂಗಳೂರು ಟ್ರೈನ್ ಗೆ ಚಾಲನೆ: ಇನ್ನು ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!

11/07/2021, 09:40

ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಭಾನುವಾರ ಸಂಸದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಿದರು.

 

ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಹಾಗೂ ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದರು.

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಹೊಂದಿದೆ. ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್ಎಚ್ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್ಫಾರ್ಮ್ / ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ  ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ. ಇದರಿಂದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ 56 ಕಿಮೀ. ಉದ್ದದ ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯ, ನದಿ, ತೊರೆ, ಜಲಪಾತಗಳು ಸೊಬಗನ್ನು ಪ್ರಯಾಣಿಕರು ಆಸ್ವಾದಿಸಲು ಸಾಧ್ಯವಾಗುತ್ತದೆ.

ಕೋಚ್ ಗಳಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾಜಿರ್ಂಗ್ ಸಾಕೆಟ್ ಗಳಿವೆ. ಇದಲ್ಲದೆ, ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು