6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮಹಿಳೆಯ ಮೊಬೈಲ್ ಕಿತ್ತು ಪರಾರಿಯಾದ ಆರೋಪಿ ಬಂಧನ: ಬಣಕಲ್ ಪೊಲೀಸರ ಕಾರ್ಯಾಚರಣೆ

04/03/2023, 20:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ.
ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021 ರ ಆಗಸ್ಟ್ ನಲ್ಲಿ ರಾತ್ರಿ ಸಂಘದ ಕೆಲಸ ಮುಗಿಸಿಕೊಂಡು ತ್ರಿಪುರ ಗ್ರಾಮದ ರಸ್ತೆಯಲ್ಲಿ ಒಬ್ಬರೇ ಹೋಗುತ್ತಿರುವಾಗ ಆರೋಪಿ ಮಣಿ ಹಿಂದಿನಿಂದ ಬಂದು ಉಮಾ ರವರ ಬಾಯಿಯನ್ನು ಗಟ್ಟಿಯಾಗಿ ಅದುಮಿ ಹಿಡಿದು ಎಳೆದಾಡಿ 12 ಸಾವಿರ ರೂ ಬೆಲೆಬಾಳುವ ಮೊಬೈಲ್ ಕಿತ್ತುಕೊಂಡು ಹೋಗಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಘಟನೆ ನಂತರ ತ್ರಿಪುರ ಗ್ರಾಮದ ಸುತ್ತಮುತ್ತ ಹೆಣ್ಣು ಮಕ್ಕಳು ಓಡಾಡಲು ಭಯಪಡುತ್ತಿದ್ದರು. ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಒಂದು ವರ್ಷ ಐದು ತಿಂಗಳಿಂದ ಸತತ ಪ್ರಯತ್ನದಿಂದ ಆರೋಪಿ ತ್ರಿಪುರದ ಮಣಿ ಎಂಬುವವರನ್ನು ಬಂಧಿಸಿದ್ದಾರೆ. ಕಾರ್ಯಚರಣೆಯಲ್ಲಿ ಮೂಡಿಗೆರೆಯ ವೃತ್ತ ನಿರೀಕ್ಷಕರು ಸೋಮಶೇಖರ್, ಸೋಮೇಗೌಡ, ಸಿಬ್ಬಂದಿಗಳಾದ ಗಿರೀಶ್, ಮನು, ಜಗದೀಶ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು