12:26 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಗ್ಯಾರಂಟಿ ನೋಂದಣಿಗೆ ವಿಶೇಷ ಅಭಿಯಾನ: ಮೊದಲ ದಿನವೇ ಅಡ್ಯಾರ್ ಗ್ರಾಪಂ ವ್ಯಾಪ್ತಿಯಲ್ಲಿ ಬಾರಿ ಜನಸ್ಪಂದನೆ

04/03/2023, 20:44

ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಇಂದು ಆರಂಭವಾದ ಗ್ರಾಮ ಭೇಟಿ, ಕಾಂಗ್ರೆಸ್ ಗ್ಯಾರಂಟಿ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಜನರಿಂದ ಬಾರಿ ಸ್ಪಂದನೆ ವ್ಯಕ್ತವಾಗಿದೆ.
ಸಹಸ್ರಾರು ಕಾರ್ಯಕರ್ತರ ಜೊತೆ ಅಡ್ಯಾರ್ ಪರಿಸರದ ಪ್ರತೀ ಮನೆಗಳಿಗೆ ಭೇಟಿ ನೀಡುತ್ತಿರುವ ಇನಾಯತ್ ಅಲಿ ಅವರು ಕಾಂಗ್ರೆಸ್ ಪಕ್ಷ ಘೋಷಿಸಿರುವ ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಗ್ಯಾರಂಟಿ ಪತ್ರಗಳನ್ನು ವಿತರಿಸಿ ಹಾಗೂ ಜನರಿಗೆ ಅದರ ಬಗೆಗಿನ ಸಂಪೂರ್ಣ ಮಾಹಿತಿಯನ್ನು ವಿವರಿಸಿ ಕಾರ್ಯಕರ್ತರ ಮೂಲಕ ಗ್ಯಾರಂಟಿಗಾಗಿ ನೋಂದಾಯಿಸುತ್ತಿದ್ದಾರೆ.

ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ವಾರ್ಡ್ ಹಾಗೂ ಪಂಚಾಯತ್ ಗಳಲ್ಲಿ ಕಾಂಗ್ರೆಸ್ ಕೊಡುಗೆಗಳನ್ನು ಜನರಿಗೆ ತಲುಪಿಸುವ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇನಾಯತ್ ಅಲಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮವು ಪಕ್ಷದ ಮೇಲೆ ಭರವಸೆ ಕಳೆದುಕೊಂಡಿರುವ ಕಾರ್ಯಕರ್ತರಿಗೂ ಸಾಕಷ್ಟು ಬಲ ತುಂಬಿದಂತಾಗಿದೆ. ಸುಡು ಬಿಸಿಲಿನ ಮಧ್ಯೆಯೂ ಕಾರ್ಯಕರ್ತರು ಬಹಳ ಹುಮ್ಮಸ್ಸಿನಿಂದ ಪಕ್ಷದ ಘೋಷಣೆಗಳೊಂದಿಗೆ ನಾಯಕರ ಜೊತೆ ಹೆಜ್ಜೆ ಹಾಕುತ್ತಿದ್ದಾರೆ.


ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಪ್ರಥ್ವಿರಾಜ್ ಆರ್.ಕೆ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಆಳ್ವ, ಕಾಂಗ್ರೆಸ್ ಮುಖಂಡರಾದ ಎಂ.ಜಿ.ಹೆಗ್ಡೆ, ಸದಾಶಿವ ಶೆಟ್ಟಿ, ಅಡ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಝೀನತ್, ಸದಸ್ಯರಾದ ದಾಮೋದರ ಶೆಟ್ಟಿ, ರೋನಾಲ್ಡ್ ಪಾಸ್ಕಲ್ ಸಲ್ದಾನ, ಫ್ಲಾವ್ಯ ಡಿಸೋಜ, ಅನಿತಾ ಡಿಸೋಜ, ಶಬೀರ್, ತುಳಸಿ, ಅಶ್ರಫ್, ಲವೀನಾ, ಖತೀಜ ಹಾಗೂ ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು