7:04 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್‍ನಲ್ಲಿ ಕಾಡ್ಗಿಚ್ಚು: ಹತ್ತಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ; ರಸ್ತೆ ಬದಿಯಲ್ಲೇ ಧಗಧಗ ಬೆಂಕಿ

06/03/2023, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್‍ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.

ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ಧಗಧಗಿಸಿ ಉರಿಯುತ್ತಿದ್ದು ಬಿರುಬಿಸಿಲಿನಿಂದ ಒಣಗಿ ನಿಂತ ಹುಲ್ಲು, ಒಣಗಿದ ಎಲೆಗಳಿಂದಾಗಿ ವೇಗವಾಗಿ ಎಲ್ಲೆಡೆಗೆ ಹರಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದು ಒಂದೆಡೆ ಬೆಂಕಿ ಕೆಡಿಸಿದರೇ ಮತ್ತೊಂದು ಕಡೆಯಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ.


ಕಳೆದ ಕೆಲ ದಿನಗಳಿಂದ ಚಾರ್ಮಾಡಿ ಘಾಟ್‍ನ ಆಲೇಕಾನ್ ಅರಣ್ಯ, ದೇವರಮನೆ, ಬಲ್ಲಾಳರಾಯನ ದುರ್ಗ ಭಾಗದಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದೆ. ಪೆಬ್ರವರಿ ತಿಂಗಳಲ್ಲಿ ಸುರಿಯುವ ಮಳೆ ಈ ಬಾರಿ ಬಾರದೇ ಇರುವುದರಿಂದ ಕಾಡ್ಗಿಚ್ಚು ಹಬ್ಬುವುದು ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು