12:31 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಮತದಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ; ಅಧಿಕಾರಿಗಳಿಗೆ ತರಬೇತಿ

06/03/2023, 23:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಉಪ ವಿಭಾಗಾಧಿಕಾರಿಗಳು ಉಪ ವಿಭಾಗ ಚಿಕ್ಕಮಗಳೂರು ಮತ್ತು ಚುನಾವಣೆ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದ ಉಪ ವಿಭಾಗ ವಿಭಾಗಾಧಿಕಾರಿ, ರಾಜೇಶ್ ಎಚ್ ಡಿ, ಅವರು ಅಧಿಕಾರಿಗಳಿಗೆ ಇವಿಎಂ ಹೇಗೆ ಕಾರ್ಯನಿರ್ವಹಿಸುತ್ತದೆ ಹಾಗೂ ಮತದಾನದ ಸಂದರ್ಭದಲ್ಲಿ ಎದುರಾಗುವ ತೊಡಕುಗಳನ್ನು ಹೇಗೆ ಬಗೆಹರಿಸಬೇಕು ಎಂಬುದನ್ನು ಸವಿವರವಾಗಿ ವಿವರಿಸಿದರು. ನಂತರ ಮಾಸ್ಟರ್ ಟ್ರೈನರ್ ಗಳಾದ
ಶ್ರೀನಿವಾಸ್ ಹಾಗೂ ತಿಮ್ಮಪ್ಪನವರು ಇವಿಎಂನ ಪ್ರಾತ್ಯಕ್ಷಿಕೆಯನ್ನು ಅಧಿಕಾರಿಗಳಿಗೆ ನೀಡಿದರು. ಜನರಲ್ಲಿ ಇವಿಎಂ ಮೂಲಕ ಹೇಗೆ ಮತದಾನದ ಮಹತ್ವವನ್ನು ನೀಡಬೇಕೆಂಬುದನ್ನಾಗಿ ಇವಿಎಂಗಳನ್ನು ಬಳಸಿಕೊಂಡು ತರಬೇತಿ ನೀಡಲಾಯಿತು. ಈ ಸಭೆಯಲ್ಲಿ ತಹಸಿಲ್ದಾರ್ ಮತ್ತು ಸಹಾಯಕ ಚುನಾವಣೆ ಅಧಿಕಾರಿ ಮೂಡಿಗೆರೆ, ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರು ತಾಲೂಕ್ ಪಂಚಾಯಿತಿ , ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸೆಕ್ಟರ್ ಅಧಿಕಾರಿಗಳು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈವಿಎಂ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು