10:50 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

07/03/2023, 15:39

ಬಂಟ್ವಾಳ(reporterkarnataka.com):
ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಕ್ಷೇತ್ರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಅವರು1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡದ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು ತಮಗೆ ಬೇಕಾದ ಶಿಕ್ಷಣವನ್ನು ಆಯ್ಕೆ ಮಾಡಿ ಶಿಕ್ಷಣದಲ್ಲಿ ಮುಂದುವರಿಯಲು ಹಾಗೂ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುರಸಭಾ ವತಿಯಿಂದ ಸಿಗುವ ಆರ್ಥಿಕ ಪ್ರೋತ್ಸಾಹ ಧನವನ್ನುಮೂವರು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಗುತ್ತಿಗೆದಾರ ಸುದರ್ಶನ ಬಜ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜನಿ ಚಿಕ್ಕಯ್ಯಮಠ ಕಾರ್ಯಕ್ರಮ ಅಧ್ಯಕ್ಷೆ ತೆ ವಹಿಸಿದ್ದರು.
ಪುರಸಭಾ ಸದಸ್ಯೆ ಝೀನತ್ ಫಿರೋಜ್, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಶ್ರೀನಿವಾಸ ಮೆಲ್ಕಾರ್, ಸುಷ್ಮಾಚರಣ್ ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ, ಪಿಡಬ್ಲೂಡಿ ಎಇಇ ಶಿವಶಂಕರ್, ಸಹಾಯಕ ಇಂಜಿನಿಯರ್ ಅಮೃತ್ ಕುಮಾರ್, ಪ್ರಮುಖರಾದ ಮಚ್ಚೇಂದ್ರ ಸಾಲಿಯಾನ್,ರಮೇಶ್ ಸಾಲಿಯಾನ್, ಇಕ್ಬಾಲ್ ಗೂಡಿನ ಬಳಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು