ಇತ್ತೀಚಿನ ಸುದ್ದಿ
ಕಾಂಗ್ರೆಸ್ ಮೊದಲ ಹಂತದ ಪಟ್ಟಿ ಸಿದ್ಧ; 170 ಕ್ಷೇತ್ರಗಳ ಟಿಕೆಟ್ ರೆಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
10/03/2023, 10:01
ಬೆಂಗಳೂರು(reporterkarnataka.com): ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ 170 ಕ್ಷೇತ್ರಗಳ ಟಿಕೆಟ್ ಅಂತಿಮಗೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಪಕ್ಷದಲ್ಲಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಬುಧವಾರ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ ಎಂದು ಸುದ್ದಿಗಾರರ ಜತೆ ಮಾತನಾಡಿದ ಅವರು ನುಡಿದರು.
170 ಕ್ಷೇತ್ರಗಳ ಟಿಕೆಟ್ ಈಗಾಗಲೇ ಅಂತಿಮಗೊಂಡಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಬೇಕಿದೆ. ಬಳಿಕ ನವದೆಹಲಿಗೆ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಅಭ್ಯರ್ಥಿಗಳ ಪಟ್ಟಿ ರವಾನೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಎಲ್ಲ ಕ್ಷೇತ್ರಗಳ ಟಿಕೆಟ್ ವಿಚಾರದಲ್ಲಿ ಒಮ್ಮತದ ತೀರ್ಮಾನ ಆಗುತ್ತಿದೆ. ಪಕ್ಷವನ್ನು ಗೆಲ್ಲಿಸಿ, ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಕಾರ್ಯಕರ್ತರು ಪಣ ತೊಟ್ಟಿದ್ದಾರೆ ಎಂದು ಹೇಳಿದರು.














