12:00 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ,‌ ಸಜ್ಜನ ರಾಜಕಾರಣಿ ಧ್ರುವನಾರಾಯಣ ಇನ್ನಿಲ್ಲ: ಕಾಂಗ್ರೆಸ್ ಕಾರ್ಯಕ್ರಮಗಳು ರದ್ದು

11/03/2023, 12:21

ಮೈಸೂರು(reporterkarnataka.com):ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ, ಸಜ್ಜನ ರಾಜಕಾರಣಿ ಆರ್. ಧ್ರವನಾರಾಯಣ ಅವರು ಹೃದಯಾಘಾತದಿಂದ ಇಂದು ನಿಧನರಾದರು.
ಚಾಮರಾಜನಗರ ಸಂಸದರಾಗಿದ್ದ ಧ್ರವನಾರಾಯಣ ಅವರು ಕಳೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಸಜ್ಜನ ರಾಜಕಾರಣಕ್ಕೆ ಪ್ರಸಿದ್ಧರಾಗಿದ್ದ ಅವರು ಸಂಸದರಾಗಿದ್ದಾಗ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದರು. ಹಿಂದುಳಿದ ಹಾಗೂ ದಲಿತ ವರ್ಗದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದರು.
ಧ್ರುವನಾರಾಯಣ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತನ್ಬೆಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಗೆಳೆಯನ ದರ್ಶನಕ್ಕೆ ತೆರಳಿದ್ದಾರೆ. ಧ್ರುವನಾರಾಯಣ ಅಕಾಲಿಕ ಸಾವಿಗೆ ಮೈಸೂರು ಸಂಸದ ಪ್ರತಾಪಸಿಂಹ ಅವರು ಕಂಬನಿ ಮಿಡಿದಿದ್ದಾರೆ. ಧ್ರುವನಾರಾಯಣ ಅವರು ಓರ್ವ ಸಜ್ಜನ ರಾಜಕಾರಣಿ. ನನಗೆ ಅಣ್ಣ ಇದ್ದ ಹಾಗೆ. ನಾನು ಮೊದಲ ಬಾರಿ ಸಂಸದನಾದಾಗ ಮೀಟಿಂಗ್ ಮಾಡುವುದರಿಂದ ಆರಂಭಗೊಂಡು ಎಲ್ಲವನ್ನು ಕಲಿಸಿದ್ದರು. ಅಷ್ಟು ಒಳ್ಳೆಯ ವ್ಯಕ್ತಿಯನ್ನು ದೇವರು ಇಷ್ಡು ಬೇಗ ಕರೆಸಿಕೊಳ್ಳಬಾರದಿತ್ತು ಎಂದು ಹೇಳಿದ್ದಾರೆ.
ಧ್ರುವನಾರಾಯಣ ಅವರ
ನಿಧನದ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನ ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು