12:01 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಅವ್ಯವಸ್ಥೆ; ಬ್ಯಾರಲಗದ್ದೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

11/03/2023, 20:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail

ರಸ್ತೆ ಅವ್ಯವಸ್ಥೆ ಮತ್ತು ಸೇತುವೆ ನಿರ್ಮಾಣವಾಗದಿರುವುದನ್ನು ಖಂಡಿಸಿ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಬ್ಯಾರಲಗದ್ದೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಅರಮನೆ ತಲಗೂರು ಗ್ರಾಮದ ಬಿಳಗಲಿಯಿಂದ ಬ್ಯಾರಲಗದ್ದೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಮಾರ್ಗದಲ್ಲಿ ಸೇತುವೆ ನಿರ್ಮಾಣ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಕೂಡ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದಾಗಿ ಬ್ಯಾರಲಗದ್ದೆ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಹಾಕಲಾಗಿದ್ದು ಬ್ಯಾನರ್‍ನಲ್ಲಿ ಮೂಡಿಗೆರೆ ತಾಲ್ಲೂಕು ಸುಂಕಸಾಲೆ ಗ್ರ.ಪಂ ವ್ಯಾಪ್ತಿಯ ಅರಮನೆ ತಲಗೂರು ಗ್ರಾಮದ ಬಿಳಗಲಿಯಿಂದ ಬ್ಯಾರಲಗದ್ದೆಗೆ ಹೋಗುವ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕಾಗಿ ಹಲವಾರು ಬಾರಿ ಮನವಿ ಮಾಡಿ ಪ್ರಯೋಜನವಾಗದೇ ಇರುವ ಹಿನ್ನಲೆಯಲ್ಲಿ ಬ್ಯಾರಲಗದ್ದೆ ಗ್ರಾಮಸ್ಥರು ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಬರೆಯಲಾಗಿದೆ.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಗಂಗಮ್ಮ, ಸದಾಶಿವ, ಸುನಂದ, ಹರೀಶ್, ಸಂತೋಷ್, ಶಿವಕುಮಾರ್, ಸುರೇಶ್, ನಿತೀನ್, ಗಣೇಶ್, ರಾಜೇಶ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು