6:39 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ16ರಂದು ಮಂಗಳೂರಿಗೆ: ಫಲಾನುಭವಿಗಳ ಸಮ್ಮೇಳನಕ್ಕೆ ಸಿಎಂ ಚಾಲನೆ

13/03/2023, 22:49

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾ.16ರಂದು ಕಡಲನಗರಿ ಮಂಗಳೂರಿಗೆ ಆಗಮಿಸಲಿದ್ದು, ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮಾ.16ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೌರವ ಉಪಸ್ಥಿತಿ ವಹಿಸುವರು.

ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ.ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ ಹಾಗೂ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರು ಹಾಗೂ ಮೇಯರ್ ಜಯಾನಂದ ಅಂಚನ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು