6:36 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ 5 ಕೋಟಿ ಮೌಲ್ಯದ ಭೂಮಿ ಅಕ್ರಮ ಮಂಜೂರು: ಸಚಿವ ಸುನಿಲ್ ವಿರುದ್ಧ ಮುತಾಲಿಕ್ ಮತ್ತೊಂದು ದಾಖಲೆ ಬಿಡುಗಡೆ

14/03/2023, 19:49

ಕಾರ್ಕಳ(reporterkarnataka.com):
ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 5 ಕೋಟಿ ಮೌಲ್ಯದ 4.71 ಎಕರೆ ಜಾಗವನ್ನು ಅಕ್ರಮವಾಗಿ ಮಂಜೂರು ಮಾಡಿದ ಕುರಿತು ದಾಖಲೆಗಳನ್ನು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬಿಡುಗಡೆ ಮಾಡಿದ್ದಾರೆ.

ಹೆಬ್ರಿಯಲ್ಲಿ ಪತ್ರಿಕಾಗೋಷ್ಢಿಯಲ್ಲಿ ಮಾತನಾಡಿದ ಅವರು, ಹೆಬ್ರಿ ತಾಲೂಕಿನ ಶಿವಪುರ ದಲ್ಲಿ ನಡೆದ ಭೂಹಗರಣದ ದಾಖಲೆ ಸಮೇತ ಲೋಕಾಯುಕ್ತ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ದಾಖಲಿಸಿದ್ದಾರೆ.
ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ಹೆಬ್ರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಾಖಲೆಯನ್ನು ಬಿಡುಗಡೆ ಮಾಡಿ ಭ್ರಷ್ರರ ವಿರುದ್ದ ಗುಡುಗಿದ್ದಾರೆ.

ಕಾರ್ಕಳದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಹಾಗೂ ಹಿಂದುತ್ವಕ್ಕೆ ದಕ್ಕೆಯಾಗಿದೆ ಎಂದು ಮೂಲ ಬಿಜೆಪಿ ಕಾರ್ಯಕರ್ತರ ಅಪೇಕ್ಷೆಯ ಮೇರೆಗೆ ಕಾರ್ಕಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತು ಘೋಷಣೆ ಮಾಡಿದ್ದೇನೆ ಎಂದರು.
ಅಕ್ರಮ ಸಕ್ರಮ ಕಾನೂನಿನ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾಗ ಮಂಜೂರು ಮಾಡಲಾಗಿದೆ. ಕಾರ್ಕಳದ ಶಾಸಕ ಸುನಿಲ್ ಕುಮಾರ ಅಧ್ಯಕ್ಷತೆಯ ಸಮಿತಿಯಲ್ಲಿ ಸುಮಾರು 2000 ಅರ್ಜಿಗಳು ಬಂದಿದ್ದರು ಸಹಾ ಅವುಗಳನ್ನು ತಿರಸ್ಕರಿಸಿ ಪ್ರಥಮ ದರ್ಜೆ ಗುತ್ತಿಗೆದಾರನಾದ ಅನಂತಕೃಷ್ಣ ಶೆಟ್ಟಿ ಅವರಿಗೆ ಅಕ್ರಮವಾಗಿ
ಸರ್ವೆ ನಂ 341-1 ರಲ್ಲಿ 4.71 ಎಕ್ರೆ ಜಾಗವನ್ನು ಮಂಜೂರು ಮಾಡಲಾಗಿದೆ. ಇದನ್ನು ಎಷ್ಟು ಕಮೀಷನ್ ಪಡೆದು ಮಂಜೂರು ಮಾಡಿದ್ದಾರೆ ಎಂದು ಸುನಿಲ್ ಕುಮಾರ್ ಉತ್ತರಿಸಲಿ. ಇದು ಜನಸಾಮಾನ್ಯರಿಗೆ ಮಾಡಿದ ದ್ರೋಹ ಇದನ್ನು ನಾನು ಖಂಡಿಸುತ್ತೇನೆ ಎಂದರು.
ಅಕ್ರಮ ಸಕ್ರಮ ಅರ್ಜಿ ಸಲ್ಲಿಸುವಾಗ ತಾನು ಪ್ರಥಮ‌ ದರ್ಜೆ ಗುತ್ತಿಗೆದಾರನಾದರೂ ಕೂಡ ಈ ಅನಂತಕೃಷ್ಣ ಶೆಟ್ಟಿ ನಾನೊಬ್ಬ ಕೃಷಿಕ ಎಂದು ಸುಳ್ಳು ಹೇಳಿ ಒಬ್ಬ ಕೋಟ್ಯಾಧಿಪತಿ ಬಡವರ ಪಾಲಗಬೇಕಿದ್ದ ಭೂಮಿಯನ್ನು ಅಕ್ರಮವಾಗಿ ಪಡೆದಿದ್ದಾರೆ. ಇವರ ವಿರುದ್ಧ ಕ್ರಿಮಿನಲ್ ಮೊಕ್ಕದಮೆ ಹೂಡಿ ಈ ಭೂಮಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಈಗಾಗಲೇ ಒಂದು ಭೂ ಹಗರದ ದಾಖಲೆಯನ್ನು ಲೋಕಯುಕ್ತಕ್ಕೆ ಸಲ್ಲಿಸಿದ್ದು ಈ ಪ್ರಕಟವನ್ನೂ ಸಹಾ ಲೋಕಯುಕ್ತಕ್ಕೆ ದೂರು ನೀಡಲಾಗುತ್ತದೆ. ಕ್ರಮಕೈಗೊಳ್ಳಲು ಮೀನಮೇಷ ಎಣಿಸಿದರೆ ಲೋಕಯುಕ್ತ ಕಚೇರಿ ಮುಂದೆ ಧರಣಿ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ರಾಮಸೇನಾ ರಾಜ್ಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ,ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್, ನಾಯಕರಾದ ಹರೀಶ್ ಅಧಿಕಾರಿ,ಸುಧೀರ್ ಹೆಬ್ರಿ ,ರಾಘವ್ ನಾಯಕ್ ಮುದ್ರಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು