8:56 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

15 ಕೋಟಿ ವೆಚ್ಚದಲ್ಲಿ ಸೆಂಟ್ರಲ್, ಜಂಕ್ಷನ್ ರೈಲ್ವೆ ನಿಲ್ದಾಣ ಅಭಿವೃದ್ಧಿ: ಸಂಸದ ನಳಿನ್ ಕುಮಾರ್ ಕಟೀಲ್

11/07/2021, 21:02

ಮಂಗಳೂರು(reporterkarnataka news): ಮುಂಬರುವ ದಿನಗಳಲ್ಲಿ ಮಾನವರಹಿತ ರೈಲು ಗೇಟುಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲು ಹೇಳಿದರು.

ಅವರು ಭಾನುವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಶವಂತಪುರ- ಮಂಗಳೂರು ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.

ರೈಲ್ವೆ ಕ್ರಾಸ್ ಗಳ ಗೇಟುಗಳಲ್ಲಿ ಮಾನವ ರಹಿತ ಗೇಟುಗಳ ಆರಂಭಕ್ಕೆ ಕೇಂದ್ರ ಸರ್ಕಾರವು ಯೋಚಿಸಿ, ಈಗಾಗಲೇ ಯೋಜನೆಯನ್ನು ರೂಪಿಸಿದೆ, ಮುಂಬರುವ ದಿನಗಳಲ್ಲಿ ಅದು ಅನುಷ್ಠಾನಗೊಳ್ಳಲಿದೆ ಎಂದು ಅವರು ಹೇಳಿದರು.

ರೈಲ್ವೆ ಇಲಾಖೆಯು, ದಕ್ಷಿಣ ಕನ್ನಡ ಜಿಲ್ಲೆಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ, 2014ರಿಂದ ಕೆಲವು ಯೋಜನೆಗಳು ಹೆಚ್ಚು ವೇಗ ಪಡೆದಿವೆ, ಮುಖ್ಯವಾಗಿ ರೈಲಿನಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ, ಅದರಂತೆಯೇ ಹೆಚ್ಚಿನ ಅನುದಾನವನ್ನು ಸಹ ನೀಡಲಾಗುತ್ತದೆ, ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ 13.5 ಕೋಟಿ ಹಾಗೂ ಮಂಗಳೂರು ಜಂಕ್ಷನ್ ಗೆ 1.2 ಕೋಟಿ ರೂ.ಗಳು ಸೇರಿದಂತೆ ಒಟ್ಟು 15 ಕೋಟಿ ರೂ.ಗಳಲ್ಲಿ ಕೈಗೊಳ್ಳಲಾದ ಹಲವು ಕಾಮಗಾರಿಗಳು ಪ್ರಗತಿಯಲ್ಲಿವೆ,  ಅದರೊಂದಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲೂ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ, ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಅದಕ್ಕೆ ಒತ್ತಾಸೆಯಾಗಿದ್ದಾರೆ ಎಂದು ಹೇಳಿದರು.

ಮಂಗಳೂರು – ವಿಜಯಪುರ ರೈಲು ಸಮಯದಲ್ಲಿ ಬದಲಾವಣೆ ಆಗಬೇಕು, ಅದು ಮಂಗಳೂರು ಸೆಂಟ್ರಲ್ ನಿಂದ ಸಂಚರಿಸಬೇಕು, ಹಗಲಿನಲ್ಲಿ ಸಂಚರಿಸುವ ಗೋಮ್ಮಟೇಶ್ವರ ಎಕ್ಸ್ ಪ್ರೆಸ್ ರೈಲು ಯಶವಂತಪುರದಿಂದ 8.15ರ ಬದಲಾಗಿ 9.30ಕ್ಕೆ ಹೊರಡಬೇಕು, ವಾರದ 7 ದಿನ ಸಂಚರಿಸಬೇಕು ಎನ್ನುವ ಬೇಡಿಕೆ ಪ್ರಯಾಣಿಕರದ್ದಾಗಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರವಾಸೋದ್ಯಮಕ್ಕೆ ಮತ್ತಷ್ಟು ಪುಷ್ಠಿ ನೀಡಲು ಪ್ರಯಾಣಿಕರಿಗೆ ಪಶ್ಚಿಮಘಟ್ಟದ ಬೆಟ್ಟಗುಡ್ಡಗಳು, ಝರಿ ತೋರೆಗಳು ಸೇರಿದಂತೆ ಪ್ರಕೃತಿಯ ರಮಣೀಯ ಸೊಬಗನ್ನು ವೀಕ್ಷಿಸಲು ಅನುಕೂಲವಾಗುವಂತೆ ರೈಲ್ವೆ ಇಲಾಖೆಯಿಂದ ವಿಸ್ಟಾಡೋಮ್ ಬೋಗಿಗಳ ರೈಲು ಪ್ರಯಾಣಕ್ಕೆ ಇಂದು ಚಾಲನೆ ನೀಡಲಾಗಿದೆ, ಪ್ರತಿ ಬೋಗಿಯಲ್ಲಿ ಒಟ್ಟು 44 ಆಸನಗಳಿವೆ,  ಈ ಬೋಗಿಯಲ್ಲಿ ಫೋಟೋಗ್ರಫಿಗೆ ಪ್ರತ್ಯೇಕ, ವಿಕಲಚೇತನರ ಅನುಕೂಲಕ್ಕೆ ಪ್ರತ್ಯೇಕ ಸ್ಥಳಾವಕಾಶ ಸೇರಿದಂತೆ ಮೆಟ್ರೋ ರೈಲಿನಲ್ಲಿ ಸಂಚರಿಸಿದ ಅನುಭವವಾಗಲಿದೆ,ಅತಿ ದೊಡ್ಡ ಗಾಜಿನ ಕಿಟಕಿಗಳಿಂದಾಗಿ ರೈಲು ಪ್ರಯಾಣಿಕರು ಪ್ರಾಕೃತಿಕ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ರೈಲ್ವೆ ಇಲಾಖೆಯ ಡಿಆರ್ ಎಂ ತ್ರಿಲೋಕ್  ಕೊಠಾರಿ, ಮಹಾನಗರ ಪಾಲಿಕೆಯ ಸದಸ್ಯರುಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು