10:54 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಈಶ್ವರಪ್ಪನವರ ಮಾತಿಗೂ ಮೆದುಳಿಗೂ ಕನೆಕ್ಷನ್ ಇಲ್ಲ: ಪ್ರತಿಪಕ್ಷದ ಉಪ ನಾಯಕ ಖಾದರ್ ಲೇವಡಿ

14/03/2023, 22:00

ಮಂಗಳೂರು(reporterkarnataka.com): ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಮಾತನ್ನು ಯಾರೂ ಅಷ್ಟು ಗಂಭೀರವಾಗಿ ಪರಿಗಣಿಸಬೇಡಿ. ಅವರ ಮಾತಿಗೂ, ಮೆದುಳಿಗೂ ಯಾವುದೇ ಕನೆಕ್ಷನ್ ಇಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಢಿಯಲ್ಲಿ ಮಾತನಾಡಿದ ಅವರು, ಚುನಾವಣೆ ಬಂದಾಗ ಧರ್ಮದ ರಾಜಕಾರಣ ಯಾರೂ ಕೂಡ ಮಾಡಬಾರದು. ಸ್ಪರ್ಧಾತ್ಮಕವಾಗಿ ಚುನಾವಣೆಯನ್ನು ಎದುರಿಸೋಣ. ಧಾರ್ಮಿಕ ಭಾವನೆ ಕೇರಳಿಸುವುದು, ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಹೇಳಿಕೆ ನೀಡಿವುದನ್ನು ಎಲ್ಲರೂ ಬಿಡಬೇಕು ಎಂದರು.

ಬಿಜೆಪಿಯ ಎಲ್ಲ ಸಚಿವರು ವಿಧಾನಸೌಧದ ಕಚೇರಿಗಳಿಗೆ ಬಾಗಿಲು ಹಾಕಿ ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರಿಪೋರ್ಟ್ ಕಾರ್ಡ್ ಗಾಗಿ ಜನರ ಮುಂದೆ ಹೊರಟಿದ್ದಾರೆ. ತಾಯಿ ಕಾರ್ಡ್, ಮಾರ್ಕ್ಸ್ ಕಾರ್ಡ್ ನೀಡುವ ಯೋಗ್ಯತೆ ಇಲ್ಲದ ಸರಕಾರ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದೆ ಎಂದು ಟೀಕಿಸಿದರು.
ಜನ ಕುಡಿವ ನೀರು ಇಲ್ಲದೇ ಪರದಾಡುವ ಸ್ಥಿತಿ ಇದೆ. ಕನಿಷ್ಠ ಕುಡಿವ ನೀರು ಕೊಡಲು ಸಾಧ್ಯವಾಗದ ಬಿಜೆಪಿಯವರ ವಿಜಯ ಸಂಕಲ್ಪ ಯಾತ್ರೆಯು, ಸೋಲಿನ ಯಾತ್ರೆ ಆಗಲಿದೆ ಎಂದು ಅವರು ನುಡಿದರು.
ಉಳ್ಳಾಲದ ರಾಣಿ ಅಬ್ಬಕ್ಕನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿಗರಿಗೆ ನಾಚಿಕೆ ಆಗಬೇಕು. ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ 40 ಲಕ್ಷ ಅನುದಾನವನ್ನು ಅಬ್ಬಕ್ಕ ಉತ್ಸವಕ್ಕೆ ನೀಡಿತ್ತು. ಬಿಜೆಪಿ ಸರ್ಕಾರ ಅನುದಾನ ಕಡಿತಗೊಳಿಸಿ 10 ಲಕ್ಷವನ್ನು ನೀಡಿದ್ದು ನಿಜಕ್ಕೂ ಬೇಸರದ ಸಂಗತಿ. ಬಿಜೆಪಿ ಸರಕಾರವು ಪರ್ಸೆಂಟೆಜ್ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆಪಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು