ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಕಾಫಿನಾಡಿನ ಬಯಲುಸೀಮೆ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆ
15/03/2023, 18:20
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಗುಡುಗು ಸಹಿತ ಇಂದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಮತ್ತು ಕಡೂರು ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆ ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆ ಅಬ್ಬರ ಜೋರಾಗಿತ್ತು.



ಕಾದ ಕಾವಲಿಯಂತಾಗಿದ್ದ ಬಯಲುಸೀಮೆಗೆ ವರಣುದೇವ ತಂಪೆರಚಿದ್ದಾನೆ. ಭಾರೀ ಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸುರಿದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ನಿನ್ನೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಿತ್ತು. ಇಂದು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.














