4:39 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಶ್ರೀ ನಿಟಿಲಾಪುರ ಸದಾಶಿವ ಮಹಾದ್ವಾರ ಲೋಕಾರ್ಪಣೆ: ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

15/03/2023, 19:35

ಬಂಟ್ವಾಳ(reporterkarnataka.com):
ಶಿವಶಕ್ತಿ ಬ್ರದರ್ಸ್ ನಿಟಿಲಾಪುರ (ರಿ.) ಟ್ರಸ್ಟ್ ಹಾಗೂ ಊರ ಪರವೂರ ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಿಸಿರುವ “ಶ್ರೀ ನಿಟಿಲಾಕ್ಷ ಸದಾಶಿವ ಮಹಾದ್ವಾರ” ದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಹಾದ್ವಾರವನ್ನು ದೀಪ ಬೆಳಗಿಸಿ ಹಾಗೂ ತೆಂಗಿನಕಾಯಿ ಒಡೆಯುವ ಮೂಲಕ ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು .
ಅದೇ ರೀತಿ ಶಾಸಕರ ಅನುದಾನದಲ್ಲಿ ನೆಟ್ಲ ದ್ವಾರದಿಂದ ನಿಟಿಲಾಪುರ ದೇವಾಲಯದವರೆಗೆ ನಿರ್ಮಾಣವಾದ ನೂತನ ಕಾಂಕ್ರೀಟ್ ರಸ್ತೆಯನ್ನೂ ಸಾಂಕೇತಿಕವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿದರು.
ಸರಿಯಾಗಿ 24 ವರ್ಷಗಳ ಹಿಂದೆ(14-03-1999) ಉದ್ಘಾಟನೆ ಯಾಗಿದ್ದ ಹಿಂದಿನ ಮಹಾದ್ವಾರವೂ ಶಿವಶಕ್ತಿ ಬ್ರದರ್ಸ್ ನೇತೃತ್ವದಲ್ಲಿ ಇದೀಗ ಸಂಘಟನೆಗೆ 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಹಳೆ ದ್ವಾರವನ್ನು ಕೆಡವಿ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಹೊಸ ದ್ವಾರವನ್ನು ನಿರ್ಮಿಸಲಾಗಿದೆ. ನಂತರ ನಿಟಿಲಾಪುರ ದೇವಾಲಯದ ಬಳಿ ಶಿವಶಕ್ತಿ ಬ್ರದರ್ಸ್ ನಿಟಿಲಾಪುರ ಟ್ರಸ್ಟ್ ಹಾಗೂ ಊರ ಭಕ್ತಾದಿಗಳ ಸಹಕಾರದಿಂದ ನೂತನವಾಗಿ ನಿರ್ಮಾಣಗೊಂಡ ಕಾಣಿಕೆಹುಂಡಿಯನ್ನೂ ದೇವಳಕ್ಕೆ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಅಭಿಷೇಕ್ ಶೆಟ್ಟಿ, ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಕಾರ್ಯಕಾರಿ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿ, ಗೋಳ್ತಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಜಗನ್ನಾಥ ಕುಲಾಲ್ ಹಾಗೂ ಮೋನಪ್ಪ ದೇವಸ್ಯ ಶಿವಶಕ್ತಿ ಬ್ರದರ್ಸ್ ಇದರ ಅಧ್ಯಕ್ಷ ಮನೋಜ್ ಗಟ್ಟಿ ನೆಟ್ಲಾ ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು