8:11 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಾನ- ಬಾಳ ರಸ್ತೆ ಕಾಮಗಾರಿ ವಿಳಂಬ ವಿರೋಧಿಸಿ ಡಿವೈಎಫ್ಐ ರಸ್ತೆತಡೆ, ಪ್ರತಿಭಟನೆ

17/03/2023, 22:05

ಸುರತ್ಕಲ್(reporterkarnataka.com): ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಒತ್ತಾಯಿಸಿ ಶುಕ್ರವಾರ ಕಾನ ಜಂಕ್ಷನ್ ಬಳಿ ಡಿವೈಎಫ್ಐ ಮತ್ತು ಆಟೋರಿಕ್ಷಾ ಚಾಲಕರ ಸಂಘ ಜಂಟಿಯಾಗಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿತು.

ಜನರ ಹೋರಾಟದಿಂದ ಮೇಲ್ದರ್ಜೆಗೇರಿದ್ದ ಸುರತ್ಕಲ್-ಕಾನ-ಬಾಳ ರಸ್ತೆಯ ಅಭಿವೃದ್ಧಿ ಕಾರ್ಯವು ಕಾನ ಜಂಕ್ಷನ್ ವರೆಗೆ ಮಾತ್ರ ಕಾಂಕ್ರಿಟಿಕರಣ ಆಗಿದ್ದು ಕಾನ ದಿಂದ ಬಾಳ, ಎಂಆರ್ ಪಿಎಲ್ ಮುಖ್ಯ ದ್ವಾರದ ವರೆಗಿನ 1.75 ಕಿಮೀ ರಸ್ತೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ, ರಸ್ತೆಯ ಅಪೂರ್ಣ ಕಾಮಗಾರಿಯಿಂದ ಪರಿಸರದಲ್ಲಿ ಧೂಳು ಹರಡಿ ಜನರ ಆರೋಗ್ಯಕ್ಕೆ ತೊಂದರೆ ಆಗುತ್ತಿದೆ. ಅಂಗನವಾಡಿಯ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗಿ ಅಂಗನವಾಡಿ ಕೇಂದ್ರ ಮುಚ್ಚುವ ಸ್ಥಿತಿಗೆ ತಲುಪಿದೆ. ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಂಡು ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು ಒಂದು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಎಚ್ಚರಿಸಿದರು.

ಡಿವೈಎಫ್ಐ ನಗರ ಉಪಾಧ್ಯಕ್ಷ ಶ್ರೀನಾಥ್ ಕುಲಾಲ್, ಆಟೋ ರಿಕ್ಷಾ ಚಾಲಕರ ಸಂಘದ ಮುಖಂಡ ಗಣೇಶ್ ಪ್ರೇಮ್ ನಗರ ಪ್ರತಿಭಟನೆಯಲ್ಲಿ ಮಾತನಾಡಿದರು.
ಡಿವೈಎಫ್ಐ ಮುಖಂಡರಾದ ಸಾದಿಕ್ ಕಿಲ್ಪಾಡಿ,ಮುಸ್ತಫಾ ಅಂಗರಗುಂಡಿ, ನವಾಜ್ ಕುಳಾಯಿ, ಮಕ್ಸೂದ್ ಬಿಕೆ, ಐ ಮೊಹಮ್ಮದ್, ರಫೀಕ್ ಸ್ಟಾರ್, ಹುಸೈನ್ ಬಾಳ, ಸೈಫರ್ ಆಲಿ ಚೊಕ್ಕಬೆಟ್ಟು, ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಮೊಹಮ್ಮದ್ ಶರೀಫ್ ಕಾನ, ಸಾಮಾಜಿಕ ಮುಂದಾಳುಗಳಾದ ಜಗದೀಶ್ ಕಾನ, ಫ್ರಾನ್ಸಿಸ್, ಮೆಹಬೂಬ್ ಖಾನ್, ಆಟೋ ರಿಕ್ಷಾ ಚಾಲಕರ ಸಂಘದ ಹಂಝ ಮೈಂದಗುರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು