9:23 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ಅಥಣಿ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ; ಪೊಲೀಸರಿಂದ ತನಿಖೆ ಶುರು

18/03/2023, 16:59

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಯುವಕನೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.
ಆಕಾಶ ಮಹಾದೇವ ಮಿರ್ಜಿ(22) ಎಂಬ ವಿದ್ಯಾರ್ಥಿ ಯ ಶವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಥಣಿಯ ಎಸ್ ಎಸ್ ಎಂಎಸ್ ಕಾಲೇಜನಲ್ಲಿ ಕಾಮರ್ಸ್ ವಿಭಾಗದ ದ್ವಿತೀಯ ವರ್ಷದಲ್ಲಿ ಓದುತ್ತಿದ್ದು, ನಿನ್ನೆ ರಾತ್ರಿ ತಾಂವಶಿ ಗ್ರಾಮದ ಅನಂತಪೂರ ರಸ್ತೆ ಪರಮಾನಂದ ತೋಟ ಹತ್ತಿರ ನೇಣಿಗೆ ಕೊರಳೊಡ್ಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ತಾಂವಶಿ ಗ್ರಾಮದ ಮಹಾದೇವ ಮಿರ್ಜಿ ಅವರಿಗೆ ಒಬ್ಬನೇ ಮಗನಾಗಿದ್ದು ತಂದೆ ಮಹಾದೇವ ಮಿರ್ಜಿ ಮೂರು ವರ್ಷದ ಹಿಂದೆ ಆಕಸ್ಮಿಕವಾಗಿ ಹೃದಯಾಘಾತದಿಂದ ನಿಧನ ಹೊಂದಿದ್ದರು.
ಕುಟುಂಬ ನಿಭಾಯಿಸುವ ಸಂಪೂರ್ಣ ಜವಾಬ್ದಾರಿ ಆಕಾಶ್ ಮೇಲಿತ್ತು. ಈಗ ಗಂಡನನ್ನು ಮತ್ತು ಮಗನನ್ನು ಕಳೆದುಕೊಂಡ ಮೃತ ಆಕಾಶ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ತನಿಖೆಯಿಂದ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು