11:33 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರು : ಎರಡೂ ಡೋಸ್ ಲಸಿಕೆ ಪಡೆದಿದ್ದ ಪೋಲಿಸ್ ಸಿಬಂಧಿ ಕೋವಿಡ್‌ಗೆ ಬಲಿ

14/05/2021, 16:42

ಮಂಗಳೂರು(Reporter Karnataka News)

ಸಿಎಆರ್ ವಿಭಾಗದಲ್ಲಿ ಸೇವೆಯಲ್ಲಿದ್ದ ಬೆಳಗಾವಿ ಮೂಲದ ಸಿದ್ದಪ್ಪ ಶಿಂಗೆ(50) ಅವರು ಕೋವಿಡ್ 19ಕ್ಕೆ ಬಲಿಯಾದ ಪೋಲಿಸ್ ಸಿಬಂಧಿ.

ಕೋವಿಡ್ ಎರಡೂ ಲಸಿಕೆಯನ್ನು ಪಡೆದಿದ್ದ ಸಿದ್ದಪ್ಪ ಶಿಂಗೆ ಅವರನ್ನು ಮೇ 5ರಂದು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರಂಭದಲ್ಲೇ ಆಕ್ಸಿಜನ್ ಕೊಟ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ, ದೇಹಸ್ಥಿತಿ ಬದಲಾವಣೆ ಆಗದೆ ಮೃತರಾಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರ್ನಾಳ್ ಎಂಬ ಊರಿನ ನಿವಾಸಿ. ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಬಳಿಕ 2016ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು. ಸಿದ್ದಪ್ಪ ಅವರಿಗೆ ಬೇರಾವುದೇ ಕಾಯಿಲೆಗಳು ಇರಲಿಲ್ಲ. ಹಾಗಿದ್ದರೂ ಸಾವಿನ ಸಂದರ್ಭದಲ್ಲಿ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು