7:51 AM Sunday1 - November 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ…

ಇತ್ತೀಚಿನ ಸುದ್ದಿ

ಪುತ್ತೂರು ಬಸ್ ನಿಲ್ದಾಣಕ್ಕೆ 26ರಂದು ಕೋಟಿ-ಚೆನ್ನಯ್ಯ ನಾಮಕರಣ: ಸಾರಿಗೆ ಸಚಿವ ರಾಮುಲು ಉಪಸ್ಥಿತಿ

24/03/2023, 20:52

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ಎಂಬ ನಾಮಕರಣ ಸಮಾರಂಭ ಮಾ.26ರಂದು ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ನಾಮಫಲಕ ಉದ್ಘಾಟಿಸುವರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಜ್ಯೋತಿ ಬೆಳಗಿಸುವರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಗೌರವ ಉಪಸ್ಥಿತಿ ವಹಿಸುವರು.

ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭೆ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಶಾಸಕ ಯು.ಟಿ. ಖಾದರ್, ಡಾ.ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಡಿ. ವೇದವ್ಯಾಸ ಕಾಮತ್, ಉಮಾನಾಥ ಎ. ಕೋಟ್ಯಾನ್, ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಪುತ್ತೂರು ನಗರ ಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು