1:22 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದೌರ್ಜನ್ಯ: ಡಿವೈಎಫ್ ಐ ಆರೋಪ; ಪೊಲೀಸ್ ಠಾಣೆಗೆ ಮುತ್ತಿಗೆ

25/03/2023, 23:52

ಮಂಗಳೂರು(reporterkarnataka.com): ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ನಡೆದಿದೆ. ಇದನ್ನು ಪ್ರತಿಭಟಿಸಿ ಡಿವೈಎಫ್ ಐ ವತಿಯಿಂದ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.


ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾ ನಗರಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿಯಿಂದ ಅನುಮೋದಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳಾಗಿದ್ದರು.
ಘಟನೆಯ ಮಾಹಿತಿ ತಿಳಿದು ಪೊಲೀಸ್ ಠಾಣೆಗೆ ನೂರಾರು ಬೀದಿ ವ್ಯಾಪಾರಿಗಳೊಂದಿಗೆ ದೌಡಾಯಿಸಿದ ಬೀದಿಬದಿ ವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಹಾಗೂ ಡಿವೈಎಫ್ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತು ಸಂಘದ ಪದಾಧಿಕಾರಿಗಳು ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ ಪರಿಣಾಮ ಬಂಧಿತರಿಬ್ಬರನ್ನು ಬಿಡುಗಡೆಗೊಳಿಸಿದ್ದಾರೆ.
ಅಲ್ಲದೆ, ಬಂಧಿಸಲ್ಪಟ್ಟಿದ್ದವರು ವ್ಯಾಪಾರ ಮಾಡುತ್ತಿದ್ದ ಮೈದಾನ ರಸ್ತೆಗೆ ಪೊಲೀಸರನ್ನು ಕರೆಸಿಕೊಂಡ ಬೀದಿಬದಿ ವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಇಮ್ತಿಯಾಝ್, ಫುಟ್ ಪಾತ್ ಮೇಲೆ ನಿರ್ಮಿಸಲಾಗಿರುವ ಕಟ್ಟಡಗಳು, ಅಂಗಡಿ, ಮಳಿಗೆಗಳನ್ನು ಮೊದಲು ತೆರವುಗೊಳಿಸಿ ಬಳಿಕ ಬಡ ಬೀದಿಬದಿ ವ್ಯಾಪಾರಿಗಳ ತಳ್ಳುಗಾಡಿಗಳನ್ನು ತೆರವು ಗೊಳಿಸುವಂತೆ ತರಾಟೆಗೆ ತೆಗೆದುಕೊಂಡರು.
ಬಿಡುಗಡೆಯಾದ ಬೀದಿ ವ್ಯಾಪಾರಿಗಳ ಜೊತೆ ಮೈದಾನ ರಸ್ತೆವರೆಗೆ ಮೆರವಣಿಗೆ ನಡೆಸಿ ಅದೇ ಸ್ಥಳದಲ್ಲಿ ವ್ಯಾಪಾರ ನಡೆಸುವುದಾಗಿ ಪಟ್ಟು ಹಿಡಿದ ಸಂಘದ ಮುಖಂಡರು ಅಲ್ಲೇ ಮತ್ತೆ ವ್ಯಾಪಾರ ಆರಂಭಿಸಿದರು ಮತ್ತು ನಗರದಲ್ಲಿ ಬಡ ಬೀದಿ ವ್ಯಾಪಾರಿಗಳು ತಮ್ಮ ಬದುಕಿಗಾಗಿ ವ್ಯಾಪಾರ ಮಾಡಿದರೆ ಬಂಧನ ಕೇಸು ಹಾಕಲಾಗುತ್ತದೆ ಶ್ರೀಮಂತರು ಬೀದಿಯಲ್ಲಿ ಆಹಾರದ ಉತ್ಸವ ನಡೆಸಿದರೆ ರಸ್ತೆಗಳನ್ನು ಮುಚ್ಚಿ ವಾಹನಗಳನ್ನು ತಡೆದು ರಸ್ತೆಯಲ್ಲೇ ಕಸಗಳನ್ನು ರಾಶಿ ಹಾಕುವವರಿಗೆ ಪೊಲೀಸ್ ಕಾವಲಿನಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ಬೀದಿ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಮುಖಂಡರಾದ ಸಂತೋಷ್ ಆರ್.ಎಸ್, ಆಸೀಫ್ ಬಾವ ಉರುಮನೆ, ಆನಂದ, ರಹಿಮಾನ್ ಅಡ್ಯಾರ್, ನೌಶಾದ್ ಉಳ್ಳಾಲ, ರಿಯಾಜ್ ಎಲ್ಯರ್ ಪದವು, ರಿಹಾಬ್ ಬಂದರ್, ಶೌಕತ್ ಆಲಿ, ಮುಝಫ್ಫರ್ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು