6:37 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಒಳಮೀಸಲಾತಿ ಕಡಿತ ಖಂಡಿಸಿ ಭಾರೀ ಪ್ರತಿಭಟನೆ: ಯಡಿಯೂರಪ್ಪರ ನಿವಾಸಕ್ಕೆ ಕಲ್ಲು ತೂರಾಟ; ಪೊಲೀಸರಿಂದ ಲಾಠಿ ಪ್ರಹಾರ

27/03/2023, 23:23

ಶಿವಮೊಗ್ಗ(reporterkarnataka.com):
ಬಂಜಾರ ಸಮುದಾಯದ ಒಳ ಮೀಸಲಾತಿ ಕಡಿತ ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ.
ಪ್ರತಿಭಟನಾಕಾರರು ಯಡಿಯೂರಪ್ಪ ಅವರ ನಿವಾಸದ ಕಿಟಕಿ ಗಾಜು ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ. ಶಿಕಾರಿಪುರ ತಾಲೂಕು ಕಚೇರಿ ಎದುರು ಪ್ರತಿಭಟನೆ ಮುಂದುವರೆದಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ರವಾನೆ ಮಾಡಲಾಗಿದೆ.


ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪೊಲೀಸರತ್ತಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು