ಇತ್ತೀಚಿನ ಸುದ್ದಿ
ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ 31ರಿಂದ ಆರಂಭ: ಏಪ್ರಿಲ್ 15ರ ವರೆಗೆ ನಿಷೇಧಾಜ್ಞೆ ಜಾರಿ
28/03/2023, 09:39
ಮಂಗಳೂರು (reporterkarnataka.com):ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ
ಮಾ.31ರಿಂದ ಆರಂಭಗೊಳ್ಳಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ಏಪ್ರಿಲ್ 15ರ ವರಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.














