ಇತ್ತೀಚಿನ ಸುದ್ದಿ
ಜೆಡಿಎಸ್ ನಮ್ಮ ಮೊದಲ ರಾಜಕೀಯ ವಿರೋಧಿ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ: ಸಿ.ಟಿ. ರವಿ
28/03/2023, 18:53
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporter Karnataka@gmail.com
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಹೇಳಿದ್ದಾರೆ. ಹೀಗಿರುವಾಗ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ.ಹೊಂದಾಣಿಕೆಯಾಗಿದ್ರೆ, ಹೆಚ್ಡಿಕೆ ವಿರುದ್ಧ ಯೋಗೀಶ್ವರ್ ಸ್ಪರ್ಧೆ ಮಾಡ್ತಿರಲಿಲ್ಲ ಎಂದರು.

ನನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿ 32 ಸಾವಿರ ಮತ ತೆಗೆದುಕೊಂಡಿದ್ದರು. ಹೊಂದಾಣಿಕೆ ಮಾಡಿದ್ರೆ ಅಷ್ಟು ಮತಗಳ ತೆಗೆದುಕೊಳ್ತಿದ್ರಾ ಎಂದು ಪ್ರಶ್ನಿಸಿದ ಸಿ.ಟಿ.ರವಿ, ನಮಗೆ ಹೊಂದಾಣಿಕೆ ಅಗತ್ಯವಿಲ್ಲ, ಬಿಜೆಪಿ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ರದೆ ಎಂದು ನುಡಿದರು.
ವರುಣಾದಲ್ಲಿ ಸಿದ್ದು ವಿರುದ್ಧ ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ನಾವು ಯಾರ ವಿರುದ್ಧೂ ಅಲ್ಲ. ನಾವು ಬಿಜೆಪಿ ಪರ ಅಷ್ಟೆ. ನಮ್ಮದು ವೈಚಾರಿಕ ರಾಜಕೀಯ ಪಕ್ಷ. ನಮ್ಮ ಪಕ್ಷದ ವಿಚಾರವನ್ನ ಬೆಳೆಸೋದಷ್ಟೆ ನಮ್ಮ ಗುರಿ. ನಮ್ಮದು ನಕಾರಾತ್ಮಕ ರಾಜಕೀಯ ಅಲ್ಲ, ಸಕಾರಾತ್ಮಕ ರಾಜಕೀಯ ಎಂದು ಅವರು ಹೇಳಿದರು.














