ಇತ್ತೀಚಿನ ಸುದ್ದಿ
ಸಿ- ವೋಟರ್ ಸಮೀಕ್ಷೆ: ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ; ಕರಾವಳಿ ಜಿಲ್ಲೆಗಳಲ್ಲಿಯೂ ಕೈ ಚೇತರಿಕೆ
29/03/2023, 23:17
ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿಯೂ ಚೇತರಿಕೆ ಕಾಣಲಿದೆ ಎಂದು ಸಿ-ವೋಟರ್ ಸಮೀಕ್ಷೆ ಅಭಿಪ್ರಾಯಪಟ್ಟಿದೆ.
ಸಿ- ವೋಟರ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 115ರಿಂದ 127, ಬಿಜೆಪಿ 68ರಿಂದ 80 ಹಾಗೂ ಜನತಾ ದಳ 23ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಕಳೆದ ಬಾರಿ ಹಿನ್ನಡೆ ಸಾಧಿಸಿದ್ದ ಕರಾವಳಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯಲಿದೆ. ಕರಾವಳಿಯ 3 ಜಿಲ್ಲೆಗಳಲ್ಲಿ
ಬಿಜೆಪಿ 9ರಿಂದ 13 ಹಾಗೂ ಕಾಂಗ್ರೆಸ್ 8ರಿಂದ 12 ಸ್ಥಾನಗಳನ್ನು ಗೆಲ್ಲಲ್ಲಿದೆ ಎಂದು ಸಮೀಕ್ಷೆ ಹೇಳಿದೆ.
ಮುಂಬೈ ಕರ್ನಾಟಕದಲ್ಲಿ ಬಿಜೆಪಿ 25, ಕಾಂಗ್ರೆಸ್ 29 ಹಾಗೂ ಜೆಡಿಎಸ್ 1 ಸ್ಥಾನ ಗೆಲ್ಲಲ್ಲಿದೆ. ಹೈದರಾಬಾದ್ ಕರ್ನಾಟಕದಲ್ಲಿ ಬಿಜೆಪಿ 12, ಕಾಂಗ್ರೆಸ್ 23 ಹಾಗೂ ಜೆಡಿಎಸ್ 1 ಸ್ಥಾನ ಗೆಲ್ಲಲ್ಲಿದೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ 28, ಬಿಜೆಪಿ 5 ಹಾಗೂ ಜನತಾ ದಳ 27 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಹಾಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ 19, ಬಿಜೆಪಿ 15 ಹಾಗೂ ಜೆಡಿಎಸ್ 3 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ ಎಂದು ಸಿ- ವೋಟರ್ ಸಮೀಕ್ಷೆ ತಿಳಿಸಿದೆ.














