12:01 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಬಂಟ್ವಾಳ ಕ್ಷೇತ್ರ: 5 ವರ್ಷದಲ್ಲಿ 2 ಸಾವಿರ ಕೋಟಿಗೂ ಅಧಿಕ ಅಭಿವೃದ್ಧಿ ಕಾಮಗಾರಿ; 1514 ಹೊಸ ರಸ್ತೆ ನಿರ್ಮಾಣ; 34 ಕಿಂಡಿ ಅಣೆಕಟ್ಟು

30/03/2023, 16:45

ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯ ನಡೆದಿದೆ. ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರ ಅಧಿಕಾರಾವಧಿಯ 4 ವರ್ಷ 10 ತಿಂಗಳಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಅಭಿವೃದ್ಧಿ ಕಾಮಗಾರಿ ನಡೆದಿದೆ.
2095.88 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರಾದ್ಯಂತ 1514 ಹೊಸ ರಸ್ತೆಗಳ ನಿರ್ಮಾಣ, 34 ಕಿಂಡಿ ಅಣೆಕಟ್ಟು, 318 ಧಾರ್ಮಿಕ ಕ್ಷೇತ್ರಗಳಿಗೆ ಮೂಲ ಸೌಕರ್ಯ ಮಾತ್ರವಲ್ಲದೆ ಸುಮಾರು 21 ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ.
ಪ್ರಮುಖವಾಗಿ ಕ್ಷೇತ್ರದ ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಲಾಗಿದೆ. 24 ಐಸಿಯು ಬೆಡ್, 7 ಡಯಾಲಿಸಿಸ್ ಘಟಕ ತೆರೆಯಲಾಗಿದೆ. ಇದರಿಂದ ದಿನಕ್ಕೆ 72 ರೋಗಿಗಳಿಗೆ ಉಚಿತ ಡಯಾಸಿಸ್ ಮಾಡಲು ಸಾಧ್ಯವಾಗಿದೆ. ಪುಂಜಾಲಕಟ್ಟೆ ಆಸ್ಪತ್ರೆಯನ್ನು 12.44 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ಬಂಟ್ವಾಳ ತಾಲೂಕು ಆಸ್ಪತ್ರೆ ಹಾಗೂ ವಾಮದಪದವು ಸಮುದಾಯ ಆಸ್ಪತ್ರೆಗೆ 2.40 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲಾಗಿದೆ. 5 ಕೋಟಿ ರೂ. ವೆಚ್ಚದಲ್ಲಿ ಬಿ.ಸಿ. ರೋಡ್ ನಗರ ಸುಂದರೀಕರಣ ಮಾಡಲಾಗಿದೆ. ಹೀಗೆ ಒಟ್ಟು 2 ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿ ನಡೆದಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳುತ್ರಾರೆ

ಇತ್ತೀಚಿನ ಸುದ್ದಿ

ಜಾಹೀರಾತು