9:21 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಬಂಡಾಯ, ವಲಸೆ ತಡೆಗೆ ಕೇಸರಿ ಪ್ಲ್ಯಾನ್: ಬಿಜೆಪಿ ಮೊದಲ ಪಟ್ಟಿ ಇನ್ನಷ್ಟು ವಿಳಂಬ ಸಾಧ್ಯತೆ; ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪುವ ಸಾಧ್ಯತೆ

31/03/2023, 10:34

ರಘುನಂದನ್ ಕೊರಟಗೆರೆ ಬೆಂಗಳೂರು

info.reporterkarnataka@gmail.com

ಪಕ್ಷದೊಳಗಿನ ಬಂಡಾಯ ಹಾಗೂ ವಲಸೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಲಕ್ಷಣ ಕಂಡು ಬರುತ್ತಿದೆ. ಹೆಚ್ಚು ಕಡಿಮೆ ವಾರದ ಬಳಿಕ ಅಂದ್ರೆ ಏ.7ರ ಬಳಿಕ ಪ್ರಥಮ ಯಾದಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಟಿಕೆಟ್ ಸಂಬಂಧಿಸಿದಂತೆ ಜಿಲ್ಲಾಮಟ್ಟದಿಂದ ರಾಜ್ಯಮಟ್ಟದ ವರೆಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ. ಇಂದಿನಿಂದಲೇ ಈ ಕಾರ್ಯ ಆರಂಭಗೊಳ್ಳಲಿದೆ. ನಂತರ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಳೆದು ತೂಗಿ ಟಿಕೆಟ್ ಹಂಚಿಕೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಕೆಲವು ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಕೋರ್ ಕಮಿಟಿಯ ಸಭೆ ಏಪ್ರಿಲ್ 4ರ ಬಳಿಕ ನಡೆಯಲಿದೆ. ಅಭಿಪ್ರಾಯ ಸಂಗ್ರಹದ ಬಳಿಕ ಶಾರ್ಟ್ ಲಿಸ್ಟ್ ಸೆಂಟ್ರಲ್ ಕೋರ್ ಕಮಿಟಿಗೆ ಹೋಗಲಿದೆ. ಹಾಲಿ ಶಾಸಕರಲ್ಲಿ ಯಾರಿಗೆ ಟಿಕೆಟ್ ನೀಡಬೇಕು, ಯಾರಿಗೆ ನೀಡಬಾರದು ಎನ್ನುವ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು