8:04 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಮಂಗಳೂರು ಲಾಡ್ಜ್ ನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ 4 ಮಂದಿ ಆತ್ಮಹತ್ಯೆ: ಮೃತರಲ್ಲಿ ಇಬ್ಬರು ಮಕ್ಕಳು

31/03/2023, 16:21

ಮಂಗಳೂರು(reporterkarnataka.com): ಒಂದೇ ಕುಟುಂಬದ ನಾಲ್ವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಗರದ ಕೆ.ಎಸ್‌ .ರಾವ್ ರಸ್ತೆಯ ಲಾಡ್ಜ್‌ವೊಂದರಲ್ಲಿ ನಡೆದಿದೆ.
ಕೆಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು ಮೈಸೂರು ಮೂಲದವರು ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ‌ಜೈನ್ ಮಾಹಿತಿ ‌ನೀಡಿದ್ದಾರೆ.
ಮೈಸೂರು ವಿಜಯ ನಗರದ ದೇವೇಂದ್ರ (46) ಮತ್ತು ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು. ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ವ್ಯಕ್ತವಾಗಿದೆ.
ಮೂರು ಮಂದಿ ವಿಷ ಪದಾರ್ಥ ಸೇವಿಸಿದ್ದು, ಒಬ್ಬರು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.


ಈ ಕುಟುಂಬ ಸದಸ್ಯರು ಲಾಡ್ಜ್‌ನಲ್ಲಿ ರೂಂ ಮಾಡಿಕೊಂಡಿದ್ದು, ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿವೆ. ಸ್ಥಳಕ್ಕೆ ಬಂದರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು