12:50 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಜಲಸಿರಿ ಯೋಜನೆಯಡಿ 24/7 ಕುಡಿಯುವ ನೀರು ಪೂರೈಕೆ: 5 ಝೋನ್ ಗಳ ರಚನೆ

13/07/2021, 20:56

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿ 24/7 ಕುಡಿ ನೀರು ಯೋಜನೆಯ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಅಧಿಕಾರಿಗಳ‌ ಸಭೆ ನಡೆಯಿತು.

‌ಪ್ರಾಯೋಗಿಕವಾಗಿ ಪಾಲಿಕೆ ವ್ಯಾಪ್ತಿಯಲ್ಲಿ 5 ಝೋನ್ ಗಳನ್ನು ಆಯ್ಕೆಮಾಡಿ 24/7 ನೀರು ಸರಬರಾಜು ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಈಗಾಗಲೇ ಸ್ಮಾರ್ಟ್ ಸಿಟಿ ಹಾಗೂ ಇತರೆ ಯೋಜನೆಗಳಡಿ ಕೈಗೊಂಡಿರುವ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳನ್ನು ನಡೆಸುವ‌ ವೇಳೆ ನೀರಿನ ಪೈಪ್ ಗಳ ಪರಿಶೀಲನೆಯ ಕ್ರಮ ಕೈಗೊಳ್ಳುವ ಕುರಿತು ಮೇಯರ್ ಸೂಚನೆ ನೀಡಿದ್ದಾರೆ. ಮುಖ್ಯ ಕೊಳವೆ ಹಾಗೂ ವಿತರಣಾ ಜಾಲಗಳ ಪರಿಶೀಲನೆಯನ್ನು ಅಗತ್ಯವಾಗಿ ನಡೆಸುವಂತೆ ಸೂಚನೆ ನೀಡಿಲಾಗಿದೆ. ಹಾಗೂ ಪ್ರತಿ 15 ದಿನಗಳಿಗೊಮ್ಮೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಪಾಲಿಕೆಯ ಉಪಮೇಯರ್ ಸುಮಂಗಲ, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರು, ಪಾಲಿಕೆ ಸದಸ್ಯರು, ಜಲಸಿರಿ ಯೋಜನೆಯ ಅಧಿಕಾರಿಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು